11:01 AM Wednesday 15 - October 2025

ಪತ್ನಿಗೆ ಕತ್ತಿಯಿಂದ ಹಲ್ಲೆ ನಡೆಸಿ ಮನೆ ಒಳಗಿಂದ ಬಾಗಿಲು ಹಾಕಿ ಕುಳಿತ ಪತಿ!

kundapur
04/08/2024

ಕುಂದಾಪುರ: ಪತ್ನಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ ಪತಿ, ಗಾಯಗೊಂಡು ರಕ್ತದ ಮಡುವಲ್ಲಿ ಬಿದ್ದಿದ್ದ ಆಕೆಯನ್ನು ಯಾರೂ ರಕ್ಷಿಸದಂತೆ  ಬಾಗಿಲಿಗೆ ಚಿಲಕ ಹಾಕಿಕೊಂಡು ಮನೆಯೊಳಗೆ ಕುಳಿತ ಘಟನೆ  ಕುಂದಾಪುರದ ಬಸ್ರೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ.

ಸೊರಬ ಮೂಲದ ಈ ದಂಪತಿ ಬಸ್ರೂರಿನ ಕಾಶಿ ಮಠ, ರೆಸಿಡೆನ್ಶಿಯಲ್ ಬ್ಲಾಕ್ ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಹಾಗೂ ಬಸ್ರೂರಿನ ಕಾಶಿ ಮಠದ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಪತಿ ಪತ್ನಿ ನಡುವೆ ವಿವಾದ ಸೃಷ್ಟಿಯಾಗಿತ್ತು. ಗಲಾಟೆ ವೇಳೆ ಪತಿ ಲಕ್ಷ್ಮಣ(40), ಪತ್ನಿ ಅನಿತಾ (38)  ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದ. ಬಳಿಕ ಮನೆಯ ಒಳಗಿನಿಂದ ಬಾಗಿಲನ್ನು ಭದ್ರವಾಗಿ ಹಾಕಿಕೊಂಡಿದ್ದಾನೆ.

ಅನಿತಾ ಅಡುಗೆ ಮನೆಯಲ್ಲಿ ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಲ್ಲಿ ಬಿದ್ದಿದ್ದರು. ಈ ವಿಚಾರ ತಿಳಿದ ಸ್ಥಳೀಯರು ಅನಿತಾ ಅವರನ್ನು ಅಡುಗೆ ಮನೆಯ ಕಿಟಕಿ ಬಾಗಿಲು ಒಡೆದ ಕೋಣೆಗೆ ತೆರಳಿ ಹೊರ ತಂದು  ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೃತ್ಯ ಎಸಗಿದ ಬಳಿಕ ಮನೆಯ ಒಳಗೆ ಇದ್ದ ಆರೋಪಿ ಲಕ್ಷ್ಮಣನನ್ನು ರಕ್ಷಿಸಲು ಪೊಲೀಸರು ಹರಸಾಹಸ ಪಡಬೇಕಾಯ್ತು.  ಆರೋಪಿ ಕೈಯಲ್ಲಿ ಕತ್ತಿ ಹಿಡಿದುಕೊಂಡು ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಬೆದರಿಸುತ್ತಿದ್ದ. ಕೊನೆಗೂ ಒಂದೂವರೆ ಗಂಟೆಗಳ ಕಾರ್ಯಾಚರಣೆ ಬಳಿಕ ಆರೋಪಿಯನ್ನು ಸಾಹಸಮಯವಾಗಿ ಹಿಡಿದು ಬಂಧಿಸಲಾಗಿದೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version