ಗರ್ಭಿಣಿ ಪತ್ನಿಯ ಪ್ರಾಣ ಉಳಿಸಲು ಮುಳುಗಡೆಯಾಗಿದ್ದ ಸೇತುವೆ ಮೇಲೆ ಕಾರು ಚಲಾಯಿಸಿದ ಪತಿ!: ವಿಡಿಯೋ ವೈರಲ್ - Mahanayaka

ಗರ್ಭಿಣಿ ಪತ್ನಿಯ ಪ್ರಾಣ ಉಳಿಸಲು ಮುಳುಗಡೆಯಾಗಿದ್ದ ಸೇತುವೆ ಮೇಲೆ ಕಾರು ಚಲಾಯಿಸಿದ ಪತಿ!: ವಿಡಿಯೋ ವೈರಲ್

wayanad
01/08/2024

ಕೇರಳದ ವಯನಾಡ್ ನಲ್ಲಿ ಭೀಕರ ಮೇಘಸ್ಫೋಟದಿಂದ ಇನ್ನೂರಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಈ ನಡುವೆ ಕೇರಳದ ಇತರ ಜಿಲ್ಲೆಗಳಲ್ಲೂ ಮಳೆಯ ಆರ್ಭಟ ಮುಂದುವರಿದಿದ್ದು, ನದಿಗಳು ಸೇತುವೆ ಮೇಲೆಯೇ ಹರಿಯುತ್ತಿದೆ.

ಇದೀಗ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಸೇತುವೆಯ ಮೇಲೆ ನೀರು ತುಂಬಿ ಹರಿಯುತ್ತಿದ್ದರೂ ವಾಹನ ಚಲಾಯಿಸಿಕೊಂಡು ಹೋಗಿರುವ ವಿಡಿಯೋವೊಂದು ವೈರಲ್ ಆಗಿದೆ.

ವ್ಯಕ್ತಿಯು ತನ್ನ ತುಂಬು ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಸಾಗಿಸಲು ಈ ರೀತಿಯಾಗಿ ಬಿಗ್ ರಿಸ್ಕ್ ತೆಗೆದುಕೊಂಡಿದ್ದಾನೆ. ತುಂಬು ಗರ್ಭಿಣಿ ಪತ್ನಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಪತ್ನಿಯನ್ನು ಸಕಾಲಕ್ಕೆ ಆಸ್ಪತ್ರೆಗೆ ಸಾಗಿಸಲು ತನ್ನ ಪ್ರಾಣವನ್ನೂ ಪಣಕ್ಕಿಟ್ಟು ಸೇತುವೆ ಮೇಲೆ ತುಂಬಿ ಹರಿಯುತ್ತಿದ್ದ ನೀರಿನಲ್ಲೇ ವಾಹನ ಚಲಾಯಿಸಿದ್ದಾನೆ.

ಪತಿ ಚಲಾಯಿಸುತ್ತಿದ್ದ ಮಾರುತಿ ಆಲ್ಟೋ ಕಾರು ಸೇತುವೆಯಲ್ಲಿ ಸರಾಗವಾಗಿ ಸಂಚರಿಸಿದ್ದು, ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ದಡದಲ್ಲಿ ನಿಂತು ಈ ದೃಶ್ಯವನ್ನು ನೋಡುತ್ತಿದ್ದವರು “ಅಯ್ಯೋ ದೇವರೇ” ಎಂದು ಆತಂಕದಿಂದ ಮಾತನಾಡುತ್ತಿರುವುದು ವಿಡಿಯೋದಲ್ಲಿ ಕೇಳಿ ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ