ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೆ ಯತ್ನಿಸಿದ ಪತಿ: ಮಚ್ಚು ಹಿಡಿದು ಸ್ಥಳದಲ್ಲೇ ನಿಂತಿದ್ದ ಪತಿ!

ಗದಗ: ಪತಿಯೋರ್ವ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಅಂಚೆ ಕಚೇರಿ ಬಳಿ ನಡೆದಿದೆ.
ಬೇಲೂರಪ್ಪ ಪೂಜಾರ ಎಂಬಾತ ತನ್ನ ಪತ್ನಿ ಗೀತಾ ಬೇಲೂರಪ್ಪ ಪೂಜಾರ (35) ಅವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ್ದಾನೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಬೇಲೂರಪ್ಪ ಪೂಜಾರ ಹೆಂಡತಿ ಮೇಲೆ ಹಲ್ಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಮಾರಣಾಂತಿಕವಾಗಿ ಹಲ್ಲೆ ಮಾಡಿರೋ ಹಿನ್ನೆಲೆಯಲ್ಲಿ ಮಹಿಳೆ ಸ್ಥಿತಿ ಗಂಭೀರವಾಗಿದ್ದು, ಆಕೆಯನ್ನು ಮುಂಡರಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಲ್ಲೆಗೆ ಒಳಗಾದ ಗೀತಾ ಬೇಲೂರಪ್ಪ ಪೂಜಾರ ಅವರು ಅಂಚೆ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು. ಹಲ್ಲೆ ಮಾಡಿದ ಆರೋಪಿ ಪತಿ ಬೇಲೂರಪ್ಪ ಮಾರಕಾಸ್ತ್ರ ಹಿಡಿದು ಸ್ಥಳದಲ್ಲೇ ನಿಂತಿದ್ದ.
ಈತನ ಹುಚ್ಚಾಟ ಕಂಡು ನೋಡಿ ಸ್ಥಳೀಯರು ಬೆಚ್ಚಿ ಬಿದ್ದಿದ್ದರು. ಸದ್ಯ ಸ್ಥಳಕ್ಕೆ ಆಗಮಿಸಿದ ಮುಂಡರಗಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth