ಪತ್ನಿಗೆ ಅಶ್ಲೀಲ ವಿಡಿಯೋ ಕಳುಹಿಸಿದ ಪತಿಗೆ 1 ತಿಂಗಳು ಜೈಲು ಶಿಕ್ಷೆ, 45 ಸಾವಿರ ರೂ. ದಂಡ!

ಬೆಂಗಳೂರು: ಪತ್ನಿಗೆ ಅಶ್ಲೀಲ ಚಿತ್ರದ ವಿಡಿಯೋ ಕಳುಹಿಸಿದ ವ್ಯಕ್ತಿಯೋರ್ವನಿಗೆ ನ್ಯಾಯಾಲಯವು ಒಂದು ತಿಂಗಳ ಜೈಲು ಶಿಕ್ಷೆ ಹಾಗೂ 45 ಸಾವಿರ ರೂಪಾಯಿ ದಂಡ ವಿಧಿಸಿದ ಘಟನೆ ನಡೆದಿದೆ.
ರಾಜಾಜಿನಗರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ 2016ರಲ್ಲಿ ಯುವತಿಯೊಬ್ಬರನ್ನು ವಿವಾಹವಾಗಿದ್ದ. ನಂತರ ಇವರ ನಡುವೆ ಮನಸ್ತಾಪ ಉಂಟಾಗಿತ್ತು. ಹೀಗಾಗಿ ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ನಡುವೆ ಆರೋಪಿ ಇಮೇಲ್ ಮೂಲಕ ಪತ್ನಿಗೆ ಅಶ್ಲೀಲ ವಿಡಿಯೋದ ಲಿಂಕ್ ಕಳುಹಿಸಿದ್ದು, ಈ ಬಗ್ಗೆ ಸಂತ್ರಸ್ತೆಯ ಕಿರಿಯ ಸಹೋದರ ದೂರು ದಾಖಲಿಸಿದ್ದರು. ಅಲ್ಲದೇ, ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತೆ ಬೆಂಗಳೂರಿಗೆ ಆಗಮಿಸಿ ದೂರು ನೀಡಿದ್ದರು.
ಈ ಬಗ್ಗೆ ತನಿಖೆ ನಡೆಸಿದಾಗ ಆರೋಪಿಯು ಅಶ್ಲೀಲ ವಿಡಿಯೋ ಲಿಂಕ್ ಕಳುಹಿಸಿರುವುದು ದೃಢಪಟ್ಟಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ಸ್ಥಳೀಯ ನ್ಯಾಯಾಲಯ ಅಪರಾಧಿಗೆ ಶಿಕ್ಷೆ ಪ್ರಕಟಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth