ಪ್ರೇಮಿಯ ಜೊತೆಗೂಡಿ ಪತಿಯ ಹತ್ಯೆ: ಅಪಘಾತವೆಂದು ಬಿಂಬಿಸಲು ಹೋಗಿ ಸಿಕ್ಕಿಬಿದ್ದ ಆರೋಪಿಗಳು

ಹಾಸನ(Mahanayaka): ಪ್ರೇಮಿಯ ಜೊತೆ ಸೇರಿ ಪತ್ನಿ ತನ್ನ ಪತಿಯನ್ನೇ ಹತ್ಯೆ ಮಾಡಿ ಅಪಘಾತವೆಂದು ಬಿಂಬಿಸಲು ಯತ್ನಿಸಿರುವ ಘಟನೆ ನಡೆದಿದ್ದು, ಈ ಸಂಬಂಧ ಪತ್ನಿ ಆಕೆಯ ತಾಯಿ ಹಾಗೂ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹಾಸನ ತಾಲ್ಲೂಕಿನ ಹೂವಿನಹಳ್ಳಿ ಗ್ರಾಮದ ಮಧು (36) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಇವರ ಮೃತದೇಹ ಜುಲೈ 5ರಂದು ರಾಷ್ಟ್ರೀಯ ಹೆದ್ದಾರಿ 376ರ ಹೂವಿನಹಳ್ಳಿ ಬಳಿ ಪತ್ತೆಯಾಗಿತ್ತು.
ಆರಂಭದಲ್ಲಿ ಇದು ರಸ್ತೆ ಅಪಘಾತದಿಂದ ನಡೆದ ಸಾವು ಎಂದು ಪ್ರಾಥಮಿಕವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ತನಿಖೆ ವೇಳೆ ಇದು ಕೊಲೆ ಪ್ರಕರಣ ಎನ್ನುವುದು ಬಯಲಾಗಿದೆ.
ಆರೋಪಿಗಳು ಕೊಲೆ ಮಾಡುವ ಉದ್ದೇಶದಿಂದ ಮಧುಗೆ ಪಾನೀಯದಲ್ಲಿ ಮದ್ಯದಲ್ಲಿ ಕುಡಿಸಿದ್ದು, ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿ, ಮೃತದೇಹವನ್ನು ರಸ್ತೆ ಬದಿಯಲ್ಲಿ ಎಸೆದು ಬೈಕ್ ಅಪಘಾತವಾಗಿರುವಂತೆ ಬಿಂಬಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD