1:04 AM Thursday 16 - October 2025

ಗುಡಿಸಲಿಗೆ ಬೆಂಕಿ: ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

chikkamagaluru (1)
23/11/2024

ಚಿಕ್ಕಮಗಳೂರು: ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಗುಡಿಸಲು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳೆಗದ್ದೆ ಹೊಸಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಹೊಸಪುರ ಗ್ರಾಮದ ಪರಿಶಿಷ್ಟ ಪಂಗಡ ಸಮುದಾಯದ ಕುಟುಂಬವೊಂದರ ಗುಡಿಸಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಪರಿಶಿಷ್ಟ ಪಂಗಡದ ಹಸಲರು ಜನಾಂಗದ ಜ್ಯೋತಿ ಚಂದ್ರು ದಂಪತಿಗಳ ಗುಡಿಸಲು ಬೆಂಕಿಗೆ ಆಹುತಿಯಾಗಿದೆ.

ವಾಸಮಾಡಲು ಮನೆಯಿಲ್ಲದೇ ಬೇಲಿಯ ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ದಂಪತಿಗಳು ತಡಿಕೆಯಿಂದಲೇ ಮನೆ ನಿರ್ಮಿಸಿಕೊಂಡಿದ್ದರು. ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, ದಂಪತಿಗಳು ಕೂಲಿಗೆ ಹೋಗಿದ್ದಾಗ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಯಿಂದ ಮನೆಯ ತಡಿಕೆ, ಪಾತ್ರೆ ಪಗಡೆ, ಬಟ್ಟೆ ಬರೆ, ದಾಖಲೆಗಳೆಲ್ಲಾ ಸುಟ್ಟುಹೋಗಿವೆ.

ಇದರಿಂದ ಬಡ ಕುಟುಂಬದ ದಂಪತಿಗಳು ಮತ್ತು ಶಾಲೆಗೆ ಹೋಗುತ್ತಿರುವ ಅವರ ಮಗ ಮತ್ತು ಮಗಳು ಅತಂತ್ರರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಮಕ್ಕಳು ಪುಸ್ತಕಗಳು ಸಹ ಸುಟ್ಟುಹೋಗಿವೆ.

ಇವರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು, ಸರ್ಕಾರದ ವಸತಿ ಯೋಜನೆಗಳಿಂದ ಮನೆ ನಿರ್ಮಾಣ ಮಾಡಿಕೊಡಬೇಕು ಎಂದು ಮೂಡಿಗೆರೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಹರೀಶ್ ಪಲ್ಗುಣಿ ಆಗ್ರಹಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

 

ಇತ್ತೀಚಿನ ಸುದ್ದಿ

Exit mobile version