1:10 PM Thursday 22 - January 2026

ಹೈದರಾಬಾದ್: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ | ಸಿಡಿದೆದ್ದ ಜನರು

hyderabad
13/09/2021

ಹೈದರಾಬಾದ್: 6 ವರ್ಷ ವಯಸ್ಸಿನ ಬಾಲಕಿಯೋರ್ವಳನ್ನು  ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್ ನ ಸೈದಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಚಾಕೊಲೇಟ್ ಕೊಡಿಸುವ ನೆಪದಲ್ಲಿ  ಕರೆದೊಯ್ದ ಆರೋಪಿಯು ಅತ್ಯಾಚಾರ ನಡೆಸಿ, ಹತ್ಯೆ ನಡೆಸಿರುವ ಘಟನೆ ನಡೆದಿದೆ.

ಘಟನೆ ಗುರುವಾರ ಸಂಜೆ 5 ಗಂಟೆಗೆ ನಡೆದಿದೆ ಎನ್ನಲಾಗಿದ್ದು, ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಶುಕ್ರವಾರ ಮುಂಜಾನೆ ಆರೋಪಿ ರಾಜು(30) ಎಂಬಾತನ ಮನೆಯಲ್ಲಿ ಪತ್ತೆಯಾಗಿದೆ. ರಾಜು ಚಾಕೊಲೇಟ್ ನೀಡುವ ಆಮಿಷವೊಡ್ಡಿ ಬಾಲಕಿಯನ್ನು ಕರೆದೊಯ್ದಿದ್ದಾನೆ ಎಂದು ಶಂಕೆ ವ್ಯಕ್ತವಾಗಿದೆ. ಶುಕ್ರವಾರ ರಾತ್ರಿಯೇ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ ಆದರೆ, ಆರೋಪಿಯ ಬಂಧನವನ್ನು ಪೊಲೀಸರು ಇನ್ನೂ ಸ್ಪಷ್ಟಪಡಿಸಿಲ್ಲ ಎಂದು ವರದಿಯಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಯುವ ಸಂಘಟನೆಗಳು ಬೀದಿಗಿಳಿದು ಹೋರಾಟ ಆರಂಭಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಕೂಡ ಆರಂಭವಾಗಿದೆ. ಶುಕ್ರವಾರ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ 300ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

ಇನ್ನಷ್ಟು ಸುದ್ದಿಗಳು…

ಪ್ರಾಣ ಸ್ನೇಹಿತರು ಜೊತೆಯಾಗಿ ಪ್ರಾಣ ಬಿಟ್ಟರು: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದು ಪ್ರಾಣಕ್ಕೆ ಕುತ್ತು ತಂದಿತು!

“ಮಗಳನ್ನು ಹೇಗಾದರೂ ಬದುಕಿಸಿ” ಎಂದು ಅತ್ತು ಗೋಗರೆದರೂ ಬಾಗಿಲು ತೆರೆಯದ ಆಸ್ಪತ್ರೆ | 5 ವರ್ಷದ ಬಾಲಕಿ ಸಾವು

ಕಾಂಗ್ರೆಸ್ ನ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ನಿಧನ

ಕೇವಲ ಐದು ರೂಪಾಯಿಗಾಗಿ ಬುಡಕಟ್ಟು ಸಮುದಾಯದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ಆನ್ ಲೈನ್ ಗೆಳೆಯನ ಭೇಟಿಗೆ ತೆರಳಿದ ಯುವತಿಗೆ ಡ್ರಗ್ಸ್ ನೀಡಿ, ಐದು ಮಂದಿಯಿಂದ ಸಾಮೂಹಿಕ ಅತ್ಯಾಚಾರ!

ಯುವತಿಯನ್ನು ಅತ್ಯಾಚಾರ ಎಸಗಿ ಪರಾರಿಯಾದ ಗ್ರಾಮ ಲೆಕ್ಕಾಧಿಕಾರಿ!

ಇತ್ತೀಚಿನ ಸುದ್ದಿ

Exit mobile version