ಆಸ್ಟ್ರೇಲಿಯಾದಲ್ಲಿ ಹೈದರಾಬಾದ್ ಮಹಿಳೆ ಶವವಾಗಿ ಪತ್ತೆ

11/03/2024

ಆಸ್ಟ್ರೇಲಿಯಾದ ವಿಕ್ಟೋರಿಯಾದ ಬಕ್ಲೆ ಎಂಬಲ್ಲಿ ರಸ್ತೆ ಬದಿಯ ಕಸದ ತೊಟ್ಟಿಯಲ್ಲಿ ಹೈದರಾಬಾದ್ ಮೂಲದ 36 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಚೈತನ್ಯ ಮದಗಣಿ ಎಂದು ಗುರುತಿಸಲಾಗಿದೆ. ಈ ಮಧ್ಯೆ ಈಕೆಯ ಪತಿ ಅಶೋಕ್ ರಾಜ್ ವಾರಿಕುಪ್ಪಲ ಆಸ್ಟ್ರೇಲಿಯಾವನ್ನು ತೊರೆದು ಮಗನೊಂದಿಗೆ ಭಾರತಕ್ಕೆ ಬಂದಿದ್ದಾರೆ.

ವಿಂಚೆಲ್ಸಿಯಾ ಬಳಿಯ ಬಕ್ಲೆಯಲ್ಲಿ ಮೃತ ವ್ಯಕ್ತಿ ಪತ್ತೆಯಾದ ನಂತರ ನರಹತ್ಯೆ ದಳದ ಪತ್ತೆದಾರರು ತನಿಖೆ ನಡೆಸುತ್ತಿದ್ದಾರೆ ಎಂದು ವಿಕ್ಟೋರಿಯಾ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಧಿಕಾರಿಗಳು ಮೃತ ವ್ಯಕ್ತಿಯನ್ನು ಮೌಂಟ್ ಪೊಲಾಕ್ ರಸ್ತೆಯಲ್ಲಿ ಪತ್ತೆ ಮಾಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪಾಯಿಂಟ್ ಕುಕ್ ನ ಮಿರ್ಕಾ ವೇಯಲ್ಲಿರುವ ವಸತಿ ನಿಲಯದಲ್ಲಿರುವ ಸಿಸಿಟಿವಿಯಲ್ಲಿ ದೃಶ್ಯವನ್ನು ಸೆರೆಹಿಡಿಯಲಾಗಿದೆ . ಈ ಕುರಿತು ತನಿಖೆ ನಡೆಯುತ್ತಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version