ನಾನು ಹಿಂದೂಸ್ತಾನಿ, ದೇಶ ಭಕ್ತಿ ಬಿಜೆಪಿಯವರಿಂದ ಕಲಿಯಬೇಕಿಲ್ಲ: ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು - Mahanayaka
5:34 PM Thursday 10 - September 2026

ನಾನು ಹಿಂದೂಸ್ತಾನಿ, ದೇಶ ಭಕ್ತಿ ಬಿಜೆಪಿಯವರಿಂದ ಕಲಿಯಬೇಕಿಲ್ಲ: ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು

zameer ahmed khan.jpg
15/08/2026

ಬೆಂಗಳೂರು: “ನಾನು ಹಿಂದೂಸ್ತಾನಿ, ನಾನು ಕನ್ನಡಿಗ. ದೇಶದ ಮೇಲಿನ ಅಭಿಮಾನ ಹಾಗೂ ದೇಶಭಕ್ತಿಯನ್ನು ನಾನು ಬಿಜೆಪಿಯವರಿಂದ ಕಲಿಯುವ ಅಗತ್ಯವಿಲ್ಲ” ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಪ್ರತಿಪಕ್ಷಗಳ ಆರೋಪಗಳಿಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸ್ವಕ್ಷೇತ್ರ ಚಾಮರಾಜಪೇಟೆಯ ಇತಿಹಾಸ ಪ್ರಸಿದ್ಧ ಈದ್ಗಾ ಮೈದಾನದಲ್ಲಿ ಆಯೋಜಿಸಲಾಗಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಕೇಳಿಬಂದಿದ್ದ ಆರೋಪಗಳಿಗೆ ಸ್ಪಷ್ಟನೆ ನೀಡಿದರು.

ವಿಜಯನಗರ ಜಿಲ್ಲೆಯ ಸ್ವಾತಂತ್ರ್ಯೋತ್ಸವ ಧ್ವಜಾರೋಹಣದಿಂದ ವಿನಾಯ್ತಿ ಕೋರಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, “ಮಂತ್ರಿ ಆದಮೇಲೆ ಧ್ವಜಾರೋಹಣ ಮಾಡುವುದು ಪ್ರತಿಯೊಬ್ಬರಿಗೂ ದೊರೆಯುವ ದೊಡ್ಡ ಸೌಭಾಗ್ಯ. ನಾನು ಹಾವೇರಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿಯಾಗಿದ್ದಾಗಲೂ ಧ್ವಜಾರೋಹಣ ಮಾಡಿದ್ದೇನೆ. ಆದರೆ ಈ ಬಾರಿ ವಿಪರೀತ ಕೆಲಸದ ಒತ್ತಡವಿದ್ದ ಕಾರಣಕ್ಕಾಗಿ, ಸ್ಥಳೀಯ ಶಾಸಕ ಬಸವಂತಪ್ಪ ಅವರಿಗೆ ಧ್ವಜಾರೋಹಣ ಮಾಡಲು ಅವಕಾಶ ನೀಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದೆ ಅಷ್ಟೇ” ಎಂದು ವಿವರಿಸಿದರು.

ವಿಪಕ್ಷಗಳಿಗೆ ತಿರುಗೇಟು:

ತಮ್ಮ ನಿರ್ಧಾರವನ್ನು ದೇಶದ್ರೋಹಕ್ಕೆ ಹೋಲಿಸಿದ ವಿಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜಮೀರ್, “ಈ ದೇಶದಲ್ಲಿದ್ದುಕೊಂಡು ದೇಶದ್ರೋಹಿಗಳು ಯಾರು ಎಂಬುದು ಈ ನಾಡಿನ ಜನತೆಗೆ ಚೆನ್ನಾಗಿ ಗೊತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ಯಾರು ಎಂಬ ಇತಿಹಾಸವೂ ಎಲ್ಲರಿಗೂ ತಿಳಿದಿದೆ. ನಾನು 2006ರಲ್ಲೇ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರದಲ್ಲೂ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದೇನೆ. ದೇಶಪ್ರೇಮದ ಬಗ್ಗೆ ಬಿಜೆಪಿಯವರಿಂದ ಪಾಠ ಕಲಿಯುವ ಅಗತ್ಯ ನನಗಿಲ್ಲ” ಎಂದು ಸ್ಪಷ್ಟಪಡಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti