ನಾನು ಟ್ರೋಲ್ ಗಳಿಗೆಲ್ಲ ಹೆದರುವುದಿಲ್ಲ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ನಾನು ಟ್ರೋಲ್ ಗಳಿಗೆಲ್ಲ ಹೆದರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದು, ನೀವು ಟ್ರೋಲ್ ಮಾಡಿದ್ರೆ ಪುಕ್ಸಟ್ಟೆ ನನಗೇನು ಆಗಬೇಕಿದೆ ಎಂದು ಪ್ರಶ್ನಿಸಿದ್ದಾರೆ.
ಆನ್ ಲೈನ್ ಸಂವಾದದ ವೇಳೆ ಶಿಕ್ಷಣ ಸಚಿವರಿಗೆ ಕನ್ನಡ ಬರೋಲ್ಲ ಎಂದು ವಿದ್ಯಾರ್ಥಿಯೊಬ್ಬ ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆಗೆ ಅವರು ಮಾತನಾಡುತ್ತಿದ್ದರು.
ನಾನು ವಿದ್ಯಾರ್ಥಿ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿಲ್ಲ, ಹೆಡ್ ಮಾಸ್ಟರ್, ಬಿಇಓ ವಿರುದ್ಧ ಕ್ರಮ ತೆಗೆದುಕೊಳ್ಳಿ ಅಂತ ಹೇಳಿದ್ದು, ಅದನ್ನು ಹೇಳಿದ್ದೇನೆ ಎಂದರು.
ಮಕ್ಕಳ ಮೇಲೆ ಆ್ಯಕ್ಷನ್ ತೆಗೆದುಕೊಳ್ಳೋಕೆ ನಮಗೆ ಅಧಿಕಾರವಿಲ್ಲ. ನಿಮ್ಮ ಮಕ್ಕಳನ್ನು ಹತೋಟಿಯಲ್ಲಿಡಬೇಕು ಅಂತ ಹೆಡ್ ಮಾಸ್ಟರ್, ಬಿಇಓ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ನಿಮ್ಮ ಮಗ ಹಾಗೆ ಮಾತನಾಡಿದ್ರೆ ನೀವು ಏನ್ ಮಾಡ್ತೀರಾ? ಎಂದು ಪ್ರಶ್ನಿಸಿದ ಅವರು ನಾನಾಗಿದ್ದರೆ ನನ್ನ ಮಗನ ಜೊತೆಗೆ ಮಾತನಾಡುತ್ತಿದ್ದೆ ಅಂತ ಹೇಳಿದ ಅವರು ಮಾಧ್ಯಮದವರು ಸಮುಮ್ಮನೆ ಇಲ್ಲದೇ ಇರೋದು ತರಬೇಡಿ, ಪದೇ ಪದೇ ಇದನ್ನ ತರೋದು ಮಾಧ್ಯಮಗಳು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97