ರೇವಣ್ಣಗೆ ಜಾಮೀನು ದೊರೆತಿರುವುದರಿಂದ ನನಗೆ ಖುಷಿಯಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ

ಬೆಂಗಳೂರು: ರೇವಣ್ಣಗೆ ಜಾಮೀನು ದೊರೆತಿರುವುದರಿಂದ ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಂತ ಹೀನಾಯ ಘಟನೆ ನಡೆದಿದೆ. ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಬೇಡ. ನಾನು ಸಂತೋಷ ಪಡುತ್ತೇನೆ ಎಂದು ಭಾವಿಸಬೇಡಿ. ಕಾರ್ಯಕರ್ತರು ಸಂಭ್ರಮಿಸುವ ಸಮಯ ಇದಲ್ಲ. ಇದು ರಾಜ್ಯವೇ ತಲೆ ತಗ್ಗಿಸುವ ಘಟನೆ ಎಂದು ಹೇಳಿದರು.
ನಿಮಗೆ ಜನ್ಮಕೊಟ್ಟ ತಂದೆ-ತಾಯಿ ಇದ್ದಾರೆ, ಒಡಹುಟ್ಟಿದವರಿದ್ದಾರೆ. ಪೆನ್ ಡ್ರೈವ್ ಹಂಚಿದವರ ವಿರುದ್ಧ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಎಸ್ ಐಟಿ ಅಧಿಕಾರಿಗಳಿಗೆ ಹೇಳಲು ಬಯಸುತ್ತೇನೆ ಎಂದು ಇದೇ ವೇಳೆ ಕುಮಾರಸ್ವಾಮಿ ಹೇಳಿದರು.
ನಾನು ನ್ಯಾಯದ ಪರವಾಗಿ ಇದ್ದೇನೆ. ಇಂತಹ ಘಟನೆ ಮತ್ತೆ ಪುನರಾವರ್ತನೆಯಾಗಬಾರದು. ಯಾವುದೇ ಮುಲಾಜಿಗೆ ಒಳಗಾಗದೇ ತನಿಖೆ ಆಗಬೇಕು. ಮಹಿಳಾ ಸಂತ್ರಸ್ತೆಯರ ಪರ ಹೋರಾಟ ಮಾಡುತ್ತೇನೆ. ಪೆನ್ ಡ್ರೈವ್ ಪ್ರಕರಣ ದೊಡ್ಡಮಟ್ಟದಲ್ಲಿ ನಡೆದಿದೆ. ಇನ್ನೂ ಸಮಯ ಇದೆ, ನಾನು ದುಡುಕಲ್ಲ ಎಂದು ಅವರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth