9:10 AM Wednesday 5 - November 2025

ನಾನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸೇವಕ ಎನ್ನಲು ಹೆಮ್ಮೆಯಿದೆ: ಚಿಕ್ಕಮಗಳೂರು ಕಾಂಗ್ರೆಸ್ ಶಾಸಕ

h d thammaiah
27/05/2023

ಚಿಕ್ಕಮಗಳೂರು:  ನಾನು ಕಾಂಗ್ರೆಸ್ ಶಾಸಕನಾಗಿದ್ದರೂ ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ ಎಂದು ಚಿಕ್ಕಮಗಳೂರು ಕಾಂಗ್ರೆಸ್ ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದ್ದಾರೆ.

ಸನ್ಮಾನ ಕಾರ್ಯಕ್ರಮವೊಂದರಲ್ಲಿ  ಮಾತನಾಡಿದ ಅವರು,  ರಾಷ್ಟ್ರೀಯ ಸ್ವಯಂ ಸೇವಕ ಸಂಘ ನನಗೆ ಶಿಸ್ತು ಕಲಿಸಿದೆ. ನಾನು ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿದ್ದರು ಸಂಘದ ಸ್ವಯಂ ಸೇವಕ ಎಂದಿದ್ದಾರೆ.

ನಾನು ಜಾತ್ಯತೀತವಾಗಿ ಕಾರ್ಯ ನಿರ್ವಹಿಸುತ್ತೇನೆ. ಪ್ರಮಾಣ ವಚನ ಸ್ವೀಕರಿಸುವಾಗ ಅದೇ ನಿಟ್ಟಿನಲ್ಲಿ ಸ್ವೀಕರಿಸಿದ್ದೇನೆ. ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

ಹಿಂದೆ ಕಾರ್ಯಕ್ರಮಗಳಿಗಾಗಿ ದಾನಿಗಳ ಬಳಿ ಹೋದಾಗ 500 ರೂ ದೊಡ್ಡ ಹಣ, ಅದು ವಸೂಲಿ ಅಲ್ಲ, ಸಂಗ್ರಹ ಎಂದು ಹೇಳಿಕೊಟ್ಟಿದ್ದೇ ಸಂಘ ಎಂದು ಅವರು ಹಿಂದಿನ ಘಟನೆಗಳನ್ನು ನೆನಪು ಮಾಡಿಕೊಂಡರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version