11:37 AM Tuesday 14 - October 2025

ದೋಸ್ತಿ: ಕಾಂಗ್ರೆಸ್‌ ಮತ್ತು ಎನ್‌ಸಿಪಿ ಮುಂದಿಡುವ ಬೇಡಿಕೆ ಈಡೇರಿಕೆಗೆ ‌ನಾನು ರೆಡಿ: ಶಿವಸೇನೆ

16/08/2024

ಮಹಾ ವಿಕಾಸ್‌ ಅಘಾಡಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್‌ ಮತ್ತು ಎನ್‌ಸಿಪಿ ಮುಂದಿಡುವ ಯಾವುದೇ ನಾಯಕನಿಗೆ ಬೆಂಬಲ ವ್ಯಕ್ತಪಡಿಸಲು ತಾನು ಸಿದ್ಧ ಎಂದು ಶಿವಸೇನೆ ಉದ್ಧವ್‌ ಬಣದ ಮುಖ್ಯಸ್ಥ ಹಾಗೂ ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್‌ ಠಾಕ್ರೆ ಹೇಳಿದ್ದಾರೆ.
ದೆಹಲಿಯಲ್ಲಿ ಎಂವಿಎ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್‌ ಠಾಕ್ರೆ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳು ರಾಜ್ಯದ ಆತ್ಮಗೌರವ ರಕ್ಷಣೆಗಾಗಿ ಹೋರಾಡುವ ಚುನಾವಣೆಯಾಗಿದೆ ಎಂದು ಹೇಳಿದರು.

“ಮಹಾ ವಿಕಾಸ್‌ ಅಘಾಡಿಯ ಸಿಎಂ ಅಭ್ಯರ್ಥಿಯ ಬಗ್ಗೆ ನಿರ್ಧರಿಸೋಣ. ನಾನು ಅದನ್ನು ಬೆಂಬಲಿಸುತ್ತೇನೆ. ಕಾಂಗ್ರೆಸ್-ಎನ್‌ಸಿಪಿ ತಮ್ಮ ಸಿಎಂ ಅಭ್ಯರ್ಥಿಯನ್ನು ಸೂಚಿಸಲು, ನಾನು ಬೆಂಬಲಿಸುತ್ತೇನೆ. ಯಾಕೆಂದರೆ ನಾವು ಮಹಾರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಬೇಕಿದೆ. “ಜನರಿಗೆ ನಾವು ಬೇಕು, ನೀವಲ್ಲ” ಎಂದು ಈ “50 ಖೋಕಾಗಳು ಮತ್ತು ಗದ್ದಾರ್‌ಗಳಿಗೆ ನಾನು ಉತ್ತರ ನೀಡಬೇಕಿದೆ” ಎಂದು ಉದ್ಧವ್‌ ಹೇಳಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version