ನಾನು ಬಸವರಾಜ ಬೊಮ್ಮಾಯಿ ಅವರನ್ನು ಮಾತ್ರ ಭ್ರಷ್ಟ ಎಂದಿದ್ದೇನೆ: ಸಿದ್ದರಾಮಯ್ಯ
 
	
	
	
	
	
ಬೆಂಗಳೂರು: ತಮ್ಮ ಹೇಳಿಕೆಯನ್ನು ತಿರುಚಿ, ರಾಜಕೀಯ ಲಾಭ ಪಡೆಯಲು ಹೊರಟಿರುವ ಬಿಜೆಪಿಯ ಷಡ್ಯಂತ್ರದ ಬಗ್ಗೆ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಮರ್ಥನೆ ನೀಡಿದ್ದಾರೆ.
ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ ಎಂದು ಹೇಳಿದ್ದೆ, ನಾನು ಬಸವರಾಜ ಬೊಮ್ಮಾಯಿ ಅವರಿಗೆ ಸೀಮಿತವಾಗಿ ಭ್ರಷ್ಟ ಎಂದು ಹೇಳಿದ್ದೆ, ಲಿಂಗಾಯತರು ಭ್ತಷ್ಟರು ಎಂದು ಎಲ್ಲಿಯೂ ಹೇಳಿಲ್ಲ. ಇದನ್ನು ವರದಿ ಮಾಡಿರುವುದು ಸರಿಯಾಗಿಲ್ಲ.
ಲಿಂಗಾಯತರಲ್ಲಿ ಬಹಳಷ್ಟು ಮಂದಿ ಮುಖ್ಯಮಂತ್ರಿಗಳು ಅತ್ಯಂತ ಪ್ರಾಮಾಣಿಕರಿದ್ದರು. ವೀರೇಂದ್ರ ಪಾಟೀಲರು, ನಿಜಲಿಂಗಪ್ಪನವರು, ಜೆ.ಹೆಚ್ ಪಟೇಲರು ಇವರೆಲ್ಲ ಪ್ರಾಮಾಣಿಕರಾಗಿದ್ದರು ಆದರೆ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭ್ರಷ್ಟರಿದ್ದಾರೆ ಎಂದು ಹೇಳಿದ್ದೆ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ಬಿಜೆಪಿಯವರು ನನ್ನ ಹೇಳಿಕೆಯನ್ನು ಕಟ್ ಮಾಡಿ ಸೇರಿಸಿ, ತಮಗೆ ಬೇಕಾದಂತೆ ತಿರುಚಿ ಚುನಾವಣೆ ಸಂದರ್ಭವಿರುವುದರಿಂದ ಅದರ ಲಾಭ ಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ. ನನಗೆ ಲಿಂಗಾಯತ ಸಮುದಾಯದ ಬಗ್ಗೆ ಅಪಾರವಾದ ಗೌರವವಿದೆ. ಹಿಂದೆ ಬಹಳ ಜನ ಲಿಂಗಾಯತರು ಪ್ರಾಮಾಣಿಕ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದರು ಆದರೆ ಬೊಮ್ಮಾಯಿ ಮಾತ್ರ ಭ್ರಷ್ಟರಾಗಿದ್ದಾರೆ ಎಂದು ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಮೂಲಕ ಸಮರ್ಥನೆ ನೀಡಿದ್ದಾರೆ.
ಲಿಂಗಾಯತರ ಬಗ್ಗೆ ನಮಗೆ ಗೌರವ ಇರುವುದರಿಂದಲೇ ಹೆಚ್ಚು ಟಿಕೇಟನ್ನು ಅವರಿಗೆ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡಿದ್ದೆವು, ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಸುಮಾರು 52 – 53 ಅಭ್ಯರ್ಥಿಗಳಿಗೆ ಟಿಕೇಟ್ ನೀಡಿದ್ದೇವೆ. ನಮ್ಮಲ್ಲಿ ಜಾತಿ ಮೇಲೆ ಮುಖ್ಯಮಂತ್ರಿಯ ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ನಮ್ಮಲ್ಲಿ ನಡೆದುಕೊಂಡುಬಂದ ಪದ್ಧತಿ. ಬಿಜೆಪಿಯವರು ಜಾತಿ ಮೇಲೆ ಮಾಡಿದರೆ ನಾವೇನು ಮಾಡೋಕಾಗಲ್ಲ.
ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿಯೇ ಇಲ್ಲ. ರಾಜಕೀಯ ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw





 
 























