8:14 PM Thursday 16 - October 2025

ನಾನು ಜೈಲುವಾಸವನ್ನೇ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್

d k shivakumar
16/10/2025

ಬೆಂಗಳೂರು: ಡಿಸಿಎಂ‌ ಆಗುತ್ತೀರಾ? ಅಥವಾ ಜೈಲಿಗೆ ಹೋಗುತ್ತೀರಾ? ಎರಡರಲ್ಲಿ ಒಂದು ಆಯ್ಕೆ ಮಾಡಬೇಕು ಎಂದ. ಜೊತೆಗಿದ್ದ ಶಾಸಕರನ್ನು ವಾಪಸ್ ಕಳುಹಿಸಲು ಹೇಳಿದರು. ಆದರೆ ನಾನು ಪಕ್ಷನಿಷ್ಠೆಗಾಗಿ ಡಿಸಿಎಂ ಬೇಡ ಎಂದು ಜೈಲುವಾಸವನ್ನೇ ಆಯ್ಕೆಮಾಡ್ಕೊಂಡೆ ಅಂತ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಜೀವನಪಯಣದ ಕುರಿತು ಹೊರಬಂದಿರುವ ಪುಸ್ತಕ ಡೈರೆಕ್ಟರ್ ಕೆ.ಎಂ.ರಘು ರಚಿಸಿರುವ ‘‘ಎ ಸಿಂಬಲ್ ಆಫ್ ಲಾಯಲ್ಟಿ ಡಿ.ಕೆ.ಶಿವಕುಮಾರ್” ಪುಸ್ತಕ ಬೆಂಗಳೂರಿನ ಎಫ್‌ ಕೆಸಿಸಿಐ ಸಭಾಂಗಣದಲ್ಲಿ ಬುಧವಾರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಕೆಲವು ರಹಸ್ಯಗಳನ್ನು ಹಂಚಿಕೊಂಡರು.

ಬೆಂಗಳೂರಿನ ಮೂವರು ಕಾಂಗ್ರೆಸ್ ಶಾಸಕರು ಸೇರಿ ಹಲವು ಮಂದಿ ಕಾಂಗ್ರೆಸ್‌ ಗೆ ರಾಜೀನಾಮೆ ಕೊಟ್ಟು ಬಿಜೆಪಿ ಕಡೆ ಮುಖ ಮಾಡಿದ್ದರು. ಅವತ್ತು ಕನಕಪುರದಲ್ಲಿದ್ದ ನಾನು ಓಡೋಡಿ ಬಂದು ನಮ್ಮ 5–6 ಶಾಸಕರನ್ನು ಕ್ವಾರ್ಟರ್ಸ್‌ ಗೆ ಕರೆದುಕೊಂಡು ಬಂದಿದ್ದೆ. ಆಗ ದೆಹಲಿಯಿಂದ ನನಗೆ ಫೋನ್ ಬಂದಿತ್ತು. ಇನ್‌ ಕಮ್ ಟ್ಯಾಕ್ಸ್ ಆಡಿಟರ್‌ ರಿಂದ ಫೋನ್ ಮಾಡಿ ಮಾತನಾಡಿಸಿದ್ದರು. ಅಲ್ಲಿ ಒಬ್ಬ ಡಿಜಿ ಸಹ ಇದ್ದ. ಅವನು ಮಾತನಾಡಿದ. ಡಿಸಿಎಂ‌ ಆಗುತ್ತೀರಾ? ಅಥವಾ ಜೈಲಿಗೆ ಹೋಗುತ್ತೀರಾ? ಎರಡರಲ್ಲಿ ಒಂದು ಆಯ್ಕೆ ಮಾಡಬೇಕು ಎಂದ. ಜೊತೆಗಿದ್ದ ಶಾಸಕರನ್ನು ವಾಪಸ್ ಕಳುಹಿಸಲು ಹೇಳಿದರು. ಆದರೆ ನಾನು ಪಕ್ಷನಿಷ್ಠೆಗಾಗಿ ಡಿಸಿಎಂ ಬೇಡ ಎಂದು ಜೈಲುವಾಸವನ್ನೇ ಆಯ್ಕೆಮಾಡ್ಕೊಂಡೆ. ನಾನು ಮನಸ್ಸು ಮಾಡಿದ್ದರೆ ಅಂದೇ ಡಿಸಿಎಂ ಆಗಬಹುದಿತ್ತು ಎಂದರು.

ವಿಧಾನಸಭೆಯಲ್ಲಿ ಆರ್‌ ಎಸ್‌ ಎಸ್ ಹಾಡು ಹೇಳಿದ್ದನ್ನು ವಿವಾದ ಮಾಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, RSS ಬಗ್ಗೆ ನಾನು ಸದನದಲ್ಲಿ ಮಾತನಾಡಿದ್ದಕ್ಕೆ ಕ್ಷಮಾಪಣೆ ಕೇಳು ಎಂದು ನನಗೆ ಯಾರೂ ಹೇಳಲಿಲ್ಲ. ನನ್ನ ಕಾರ್ಯಕರ್ತರಿಗೆ ನೋವು ಆಗಬಾರದು ಎಂದು ಕ್ಷಮೆ ಕೇಳಿದೆ ಎಂದು ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version