ಅಧಿಕಾರಿಗಳು ಯಾವಾಗ ಬಟ್ಟೆ ಹರ್ಕೊತ್ತಾರೋ ಗೊತ್ತಿಲ್ಲ: ಎನ್.ಮಹೇಶ್ - Mahanayaka
11:26 PM Friday 19 - December 2025

ಅಧಿಕಾರಿಗಳು ಯಾವಾಗ ಬಟ್ಟೆ ಹರ್ಕೊತ್ತಾರೋ ಗೊತ್ತಿಲ್ಲ: ಎನ್.ಮಹೇಶ್

n mahesh
22/06/2023

ಚಾಮರಾಜನಗರ: ಪಂಚ ಗ್ಯಾರಂಟಿ ಘೋಷಣೆ ಮಾಡಿ ಸರ್ಕಾರ ಸಾಕಷ್ಟು ಗೊಂದಲವನ್ನು ಸೃಷ್ಟಿ ಮಾಡುತ್ತಿದೆ ಎಂದು ಕೊಳ್ಳೇಗಾಲದ ಮಾಜಿ ಶಾಸಕ ಎನ್.ಮಹೇಶ್ ಆರೋಪಿಸಿದರು.

ಚಾಮರಾಜನಗರದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಅವರು ಮಾತನಾಡಿ, ಗ್ಯಾರಂಟಿ ಜಾರಿಗಾಗಿ ಕಂಡಿಷನ್ಸ್ ಗಳನ್ನು ಹಾಕಿ ಗೊಂದಲ ಉಂಟು ಮಾಡಿದ್ದು ಐಎಎಸ್  ಅಧಿಕಾರಿಗಳು ತಲೆ ಪರಚಿಕೊಳ್ಳುತ್ತಿದ್ದಾರೆ. ಯಾವಾಗ, ಬಟ್ಟೆ ಹರ್ಕೋತ್ತಾರೋ ಗೊತ್ತಿಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ.

ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದೆ. ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡಬೇಕು. ಜು.1 ರಿಂದ 15 ಕೆಜಿ ಅಕ್ಕಿ ಕೊಡದಿದ್ದರೇ ನಾವು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಶಕ್ತಿ ಯೋಜನೆ ಎಷ್ಟು ದಿನ ಇರತ್ತೋ ಗೊತ್ತಿಲ್ಲ, ಡೀಸೆಲ್ ಗೂ ಅವರ ಬಳಿ ದುಡ್ಡು ಹೊಂದಿಸಲು ಸಾಧ್ಯವಿಲ್ಲ ಎಂದು ಕೈ ವಿರುದ್ಧ ಲೇವಡಿ ಮಾಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ