ನಗಬೇಕೋ, ಅಳಬೇಕೋ ಗೊತ್ತಾಗುತ್ತಿಲ್ಲ: ಬಿ.ಎಸ್.ಯಡಿಯೂರಪ್ಪ ಹೀಗೆ ಹೇಳಿದ್ಯಾಕೆ ಗೊತ್ತಾ?

ಬೆಳಗಾವಿ: ಪ್ರಧಾನಿ ಮೋದಿ ಬಗ್ಗೆ ಮಾತನಾಡಿದರೆ, ತಾವು ದೊಡ್ಡ ನಾಯಕರಾಗುತ್ತೇವೆ ಎನ್ನುವ ಭ್ರಮೆ ಸಿದ್ದರಾಮಯ್ಯನವರಿಗಿದೆ, ಇದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಯೋಚಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮೋದಿ ಅತ್ಯಂತ ಹೆಚ್ಚು ಸುಳ್ಳು ಹೇಳಿರುವ ಪ್ರಧಾನಿ ಎಂಬ ಸಿದ್ದರಾಮಯ್ಯನವರ ಮಾತಿಗೆ ಪ್ರತಿಕ್ರಿಯಿಸಿದ ಅವರು, ಈ ಮಾತಿಗೆ ನಗಬೇಕೋ ಅಳಬೇಕೋ ಗೊತ್ತಾಗುವುದಿಲ್ಲ, ಇಂತಹ ಮಾತು ಕಡಿಮೆ ಮಾಡಿ, ನಿಮ್ಮ ಸಿಎಂ ಸ್ಥಾನಕ್ಕೆ ಗೌರವ ತರುವಂತೆ ನಡೆದುಕೊಳ್ಳಿ ಎಂದು ಸಲಹೆ ನೀಡಿದರು.
ಕೇಂದ್ರವು ರಾಜ್ಯ ಸರ್ಕಾರಕ್ಕೆ ನೀಡಬೇಕಾದ ಹಣಕಾಸಿನ ನೆರವಿನ ಬಗ್ಗೆ ನಿರ್ಮಲಾ ಸೀತಾರಾಮನ್ ಸ್ಪಷ್ಟವಾಗಿ ಹೇಳಿದ್ದಾರೆ. ಆದರೂ ಮೋದಿ ಅವರನ್ನು ಟೀಕಿಸಿ ಮಾತನಾಡುತ್ತಾರೆ ಎಂದು ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಮೋದಿ ಹೆಸರು ಹೇಳಿ ಮತ ಕೇಳಿದ್ರೆ ಕಪಾಳ ಮೋಕ್ಷ ಮಾಡಿ ಎಂಬ ಶಿವರಾಜ ತಂಗಡಗಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಮಾತು ಶಿವರಾಜ್ ತಂಗಡಿಗೆ ಶೋಭೆ ತರುವುದಿಲ್ಲ, ಕಾಂಗ್ರೆಸ್ ಗೂ ಶೋಭೆ ತರುವುದಿಲ್ಲ, ಇದು ಅತಿರೇಕದ ಪರಮಾವಧಿ ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth