ನಾನು ರಾಜೀನಾಮೆ ನೀಡುತ್ತೇನೆ ಎಂದಿಲ್ಲ, ಅದೆಲ್ಲ ವಾಟ್ಸಾಪ್, ಟಿವಿ ಯುನಿವರ್ಸಿಟಿ ಸೃಷ್ಟಿ: ಬಿ.ಕೆ.ಹರಿಪ್ರಸಾದ್ ಸ್ಪಷ್ಟನೆ - Mahanayaka

ನಾನು ರಾಜೀನಾಮೆ ನೀಡುತ್ತೇನೆ ಎಂದಿಲ್ಲ, ಅದೆಲ್ಲ ವಾಟ್ಸಾಪ್, ಟಿವಿ ಯುನಿವರ್ಸಿಟಿ ಸೃಷ್ಟಿ: ಬಿ.ಕೆ.ಹರಿಪ್ರಸಾದ್ ಸ್ಪಷ್ಟನೆ

b k hariprasad
27/05/2023

ಬೆಂಗಳೂರು:  ನಾನು ರಾಜೀನಾಮೆ ನೀಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ, ಇವೆಲ್ಲ “ವಾಟ್ಸಾಪ್ ಯುನಿವರ್ಸಿಟಿ” ಮತ್ತು “ಟೆಲಿವಿಷನ್ ಯುನಿವರ್ಸಿಟಿ”ಯ ಸೃಷ್ಟಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.


Provided by

ಸಚಿವ ಸ್ಥಾನ ದೊರಕದ ಹಿನ್ನೆಲೆಯಲ್ಲಿ ಬಿ.ಕೆ.ಹರಿಪ್ರಸಾದ್ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ ಬೆನ್ನಲ್ಲೇ  ಸುದ್ದಿವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಹರಿಪ್ರಸಾದ್,  ಸಚಿವ ಸಂಪುಟ ವಿಸ್ತರಣೆ ಮತ್ತು ನಿರ್ಧಾರ ಮುಖ್ಯಮಂತ್ರಿಗಳ ಪರಮಾಧಿಕಾರ. ನಾನೆಂದೂ ಸಚಿವ ಸ್ಥಾನ ಬೇಕು ಎಂದು ಬೇಡಿಕೆ ಇಟ್ಟವನಲ್ಲ, ರಾಜೀನಾಮೆ ನೀಡುತ್ತೇನೆ ಎಂದು ಹೇಳಿಲ್ಲ, ಇದೆಲ್ಲ, ವಾಟ್ಸಾಪ್, ಟೆಲಿವಿಷನ್ ಸೃಷ್ಟಿ ಎಂದು ಹೇಳಿದರು.

ನನ್ನ ಪರಮೋಚ್ಛ ನಾಯಕಿ ಸೋನಿಯಾ ಗಾಂಧಿಯವರು ನನ್ನ ಮೇಲೆ ಜವಾಬ್ದಾರಿ ಕೊಟ್ಟು, ಪರಿಷತ್ ಸ್ಥಾನ ನೀಡಿದ್ದಾರೆ. ಅದನ್ನು ನಿಭಾಯಿಸುತ್ತಿದ್ದೇನೆ. ರಾಜೀನಾಮೆ ನೀಡುವುದಿದ್ದರೆ, ಸೋನಿಯಾ ಗಾಂಧಿ ಮತ್ತು ಸಭಾಪತಿಗೆ ನೀಡುತ್ತಿದೆ. ಸಚಿವ ಸ್ಥಾನ ಇಲ್ಲದಿದ್ದರೂ ಪರಿಷತ್ ನಲ್ಲಿ ನಾನು ಸಾಮಾನ್ಯ ಸದಸ್ಯನಾಗಿರುತ್ತೇನೆ ಎಂದು ಅವರು ಹೇಳಿದ್ರು.


Provided by

ಇನ್ನೂ ಅಧಿಕಾರ ಹಂಚಿಕೆ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿಕಾರ ಹಂಚಿಕೆಯ ಬಗ್ಗೆ ಪಕ್ಷದ ನಾಯಕರಾದ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಹಾಗೂ ಸುರ್ಜೇವಾಲಾ ಅವರಿಗೆ ಮಾತ್ರ ಗೊತ್ತಿದೆ. ಉಳಿದವರು ಏನೇ ಮಾತನಾಡಿದರು ಅದು ಸುಳ್ಳು, ಓಲೈಕೆಯ ಹೇಳಿಕೆಗಳು ಎಂದು ಸ್ಪಷ್ಟಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ