8:21 PM Saturday 15 - November 2025

ನನಗೆ ಪದೇ ಪದೇ ಫೋನ್ ಬಂತು, ನಂತರ ಅಶ್ಲೀಲ ಚಿತ್ರ ಬಂತು: ಬಿಜೆಪಿ ಶಾಸಕ ಸ್ಪಷ್ಟನೆ!

tripura
31/03/2023

ಅಗರ್ತಲಾ: ತ್ರಿಪುರಾ ವಿಧಾನಸಭೆ ಅಧಿವೇಶನದ ವೇಳೆ ಮೊಬೈಲ್ ಫೋನ್‌ನಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದ ಬಿಜೆಪಿ ಶಾಸಕ ಜದಾಬ್‌ ಲಾಲ್ ನಾಥ್ ವಿರುದ್ಧ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಬಜೆಟ್ ಅಧಿವೇಶನದ ಕೊನೆ ದಿನವಾದ ಬುಧವಾರ ವಿಧಾನಸಭೆ ಕಲಾಪಗಳು ನಡೆಯುತ್ತಿರುವ ವೇಳೆ ಜದಾಬ್‌ ಲಾಲ್ ನಾಥ್ ಅಶ್ಲೀಲ ಚಿತ್ರ ವೀಕ್ಷಿಸುವುದರಲ್ಲಿ ಮಗ್ನನಾಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿತ್ತು.

ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಾಸಕ ಜದಾಬ್‌ ಲಾಲ್ ನಾಥ್, ನನಗೆ ಪದೇ ಪದೇ ಕರೆಗಳು ಬರುತ್ತಿತ್ತು. ನಾನು ಕರೆ ಸ್ವೀಕರಿಸುತ್ತಿದ್ದಂತೆಯೇ ನನ್ನ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ಬರಲು ಆರಂಭಿಸಿದವು ಎಂದಿದ್ದಾರೆ.

‘ಈ ವಿಷಯದ ಬಗ್ಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ರಾಜೀಬ್ ಭಟ್ಟಾಚಾರ್ಯ ಶಾಸಕರ ಜೊತೆ ಮಾತನಾಡಿದ್ದು, ಅವರು ಸ್ವಲ್ಪ ತಾಳ್ಮೆ ವಹಿಸುವಂತೆ ಸೂಚಿಸಿದರು’ ಎಂದು ತಿಳಿಸಿದರು.

ಇದೊಂದು ನಾಚಿಕೆಗೇಡಿನ ಘಟನೆ. ಇದಕ್ಕಾಗಿ ಕಮಲ್ ನಾಥ್ ಅವರನ್ನು ಶಿಕ್ಷಿಸಬೇಕು ಎಂದು ಕಾಂಗ್ರೆಸ್ ಹೇಳಿದೆ. ಈ ಘಟನೆಯು ಶಾಸಕರ ವರ್ಚಸ್ಸಿಗೆ ಕಳಂಕ ತಂದಿದೆ. ಅವರಿಗೆ ಸೂಕ್ತ ಶಿಕ್ಷೆಯಾಗಬೇಕು. ವಿಧಾನಸಭೆಯಲ್ಲಿ ಮೊಬೈಲ್ ಫೋನ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಶ್ಲೀಲ ಚಿತ್ರ ಹೇಗೆ ವೀಕ್ಷಿಸಲು ಸಾಧ್ಯ?’ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಿರಾಜಿತ್ ಸಿನ್ಹಾ ಪ್ರಶ್ನಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version