ನಾನು & ಬಿಜೆಪಿ ಅಲ್ಪಸಂಖ್ಯಾತರ ವಿರುದ್ಧ ಎಂದೂ ಕೂಡಾ ಮಾತಾಡಿಯೇ ಇಲ್ಲ ಎಂದ ಪ್ರಧಾನಿ ಮೋದಿ - Mahanayaka

ನಾನು & ಬಿಜೆಪಿ ಅಲ್ಪಸಂಖ್ಯಾತರ ವಿರುದ್ಧ ಎಂದೂ ಕೂಡಾ ಮಾತಾಡಿಯೇ ಇಲ್ಲ ಎಂದ ಪ್ರಧಾನಿ ಮೋದಿ

20/05/2024

ತಾನು ಅಲ್ಪಸಂಖ್ಯಾತರ ವಿರುದ್ಧ ಎಂದೂ ಕೂಡಾ ಮಾತಾಡಿಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿ ಕೂಡ ಅಲ್ಪಸಂಖ್ಯಾತರ ವಿರುದ್ಧ ಕೆಲಸ ಮಾಡಿಲ್ಲ. ಆದರೆ ಯಾರನ್ನೂ ಕೂಡ ನಾವು ವಿಶೇಷ ಪೌರರಾಗಿ ಅಂಗೀಕರಿಸುವುದಕ್ಕೆ ತಯಾರಿಲ್ಲ ಎಂದು ಅವರು ಹೇಳಿದ್ದಾರೆ ಪಿ ಟಿ ಐ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂವಿಧಾನದ ಜಾತ್ಯತೀತ ಸ್ವರೂಪವನ್ನು ಕೆಡಿಸಲು ಕಾಂಗ್ರೆಸ್ ಪ್ರಯತ್ನಿಸಿದೆ. ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಪ್ರತಿಪಕ್ಷಗಳು ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ. ಇದನ್ನು ವಿವರಿಸುವುದಕ್ಕಾಗಿ ನಾನು ಚುನಾವಣಾ ಪ್ರಚಾರದ ವೇದಿಕೆಯಲ್ಲಿ ಭಾಷಣ ಮಾಡಿದ್ದೇನೆ ಎಂದು ಮೋದಿ ಸಮರ್ಥಿಸಿಕೊಂಡಿದ್ದಾರೆ.

ಅಂಬೇಡ್ಕರ್ ಮತ್ತು ನೆಹರೂ ಅವರು ಧರ್ಮದ ಆಧಾರದಲ್ಲಿ ಮೀಸಲಾತಿ ಬೇಡ ಎಂದು ತೀರ್ಮಾನಿಸಿದ್ದರು. ಆದರೆ ಇದೀಗ ಕಾಂಗ್ರೆಸ್ ಆದ್ರಿಂದ ಹಿಂಜರಿದಿದೆ.ಅದನ್ನು ಬಹಿರಂಗಪಡಿಸುವುದು ನನ್ನ ಕರ್ತವ್ಯವಾಗಿದೆ.ಸಂವಿಧಾನ ರಚನಾ ಸಭೆಯಲ್ಲಿ ನನ್ನ ಪಕ್ಷದ ಒಬ್ಬರೂ ಇರಲಿಲ್ಲ ಎಂದು ಮೋದಿ ಹೇಳಿಕೊಂಡಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.


Provided by
Provided by

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ