ನಾನು ಚುನಾವಣೆ ಕೆಲಸಕ್ಕೆ ಮಾತ್ರ ಬಂದಿದ್ದೇನೆ: ಸಾರ್ವಜನಿಕರ ವಿರುದ್ಧ ಗರಂ ಆಗ ತಹಶೀಲ್ದಾರ್!

ಚಿಕ್ಕಮಗಳೂರು : ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಕೆಲಸಗಳು ಪೆಂಡಿಂಗ್ ಆಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳ ಬಳಿ ವಿಚಾರಿಸಿದರೆ, ಅಧಿಕಾರಿಗಳು ಸಾರ್ವಜನಿಕರ ವಿರುದ್ಧ ರೇಗಾಡುತ್ತಿರುವ ಆರೋಪ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಮೂಡಿಗೆರೆ ತಹಸೀಲ್ದಾರ್ ತಿಪ್ಪೇಸ್ವಾಮಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, 94ಸಿ ಹಕ್ಕು ಪತ್ರ ನೀಡಲು ಅಲೆದಾಡಿಸುತ್ತಿರುವ ಆರೋಪ ಕೇಳಿ ಬಂದಿದೆ.
ಸಾರ್ವಜನಿಕರು ತಮ್ಮ ಕೆಲಸಗಳನ್ನು ಮಾಡಿಕೊಡುವಂತೆ ಮನವಿ ಮಾಡಿದ್ದು, ಈ ವೇಳೆ ಅವರು ನಾನು ಚುನಾವಣೆ ಕೆಲಸಕ್ಕೆ ಮಾತ್ರ ಬಂದಿದ್ದೇನೆ ಎಂದು ಹೇಳಿದ್ದಾರೆ. ಈ ವೇಳೆ ಸಾರ್ವಜನಿಕರು ಆ ರೀತಿಯಾಗಿ ಹೇಳ ಬೇಡಿ ಎಂದಿದ್ದಕ್ಕೆ ಸ್ಥಳೀಯರ ವಿರುದ್ಧ ಗರಂ ಆಗಿ ಕೂಗಾಡಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ.
ಸಾರ್ವಜನಿಕರ ಜೊತೆಗೆ ದರ್ಪದಿಂದ ನಡೆದುಕೊಳ್ಳುತ್ತಿರು ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw