ಶಿಗ್ಗಾಂವಿ ಕ್ಷೇತ್ರದಲ್ಲಿ ನನಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಸಿಎಂ ಬಸವರಾಜ ಬೊಮ್ಮಾಯಿ - Mahanayaka

ಶಿಗ್ಗಾಂವಿ ಕ್ಷೇತ್ರದಲ್ಲಿ ನನಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಸಿಎಂ ಬಸವರಾಜ ಬೊಮ್ಮಾಯಿ

basavaraj bomayi2
15/04/2023


Provided by

ಹಾವೇರಿ: ಶಿಗ್ಗಾಂವಿ ಕ್ಷೇತ್ರದಲ್ಲಿ ನನಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಹಲವಾರು ಬಾರಿ ಶಿಗ್ಗಾಂವಿ ಮತಕ್ಷೇತ್ರದ ಜನರು ಆಶೀರ್ವಾದ ಮಾಡಿ, ಬೆಂಬಲವನ್ನು ಕೊಟ್ಟಿದ್ದಾರೆ. ಈ ಬಾರಿಯೂ ಹಿಂದಿನ ದಾಖಲೆಯನ್ನು ಮುರಿದು, ಅತ್ಯಧಿಕ ಮತದಿಂದ ಆರಿಸಿ ಬರುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಶಿಗ್ಗಾಂವಿಯ ತಹಶೀಲ್ದಾರ ಕಚೇರಿಯಲ್ಲಿ 2023 ರ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಈ ತಾಲೂಕಿನ ಮತದಾರರು ಪ್ರಭುದ್ಧ, ಜಾಗೃತ ಮತದಾರರಿದ್ದಾರೆ. ಈ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಮತವನ್ನು ಕ್ಷೇತ್ರದ ಜನರು ನೀಡಿದ್ದಾರೆ. ಈ ಬಾರಿ ಕಳೆದ ಬಾರಿಗಿಂತಲೂ ಹೆಚ್ಚಿನ ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ. ಎಲ್ಲ ವರ್ಗಕ್ಕೆ ಸಮಾನವಾದ ಅಭಿವೃದ್ಧಿಗೆ ಒತ್ತು ನೀಡಿದ್ದೇವೆ ಎಂದರು.

ಹೊಸ ಕೈಗಾರಿಕೆ, ಟೈಕ್ಸ್ಟೈಲ್ ಪಾರ್ಕ್, ಐಐಟಿ, ಆಯುರ್ವೇದಿಕ ಆಸ್ಪತ್ರೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳು ಆಗಿವೆ. ಹೀಗಾಗಿ ಜನರು ಹಿಂದಿನಕ್ಕಿಂತಲೂ ಹೆಚ್ಚಿನ ಬೆಂಬಲವನ್ನು ಕೊಡುತ್ತಾರೆ. ನಮ್ಮದು ಆಡಳಿತ ಪಕ್ಷವಾಗಿರುವುದರಿಂದ ಆಕಾಂಕ್ಷಿಗಳು ಬಹಳ ಇದ್ದಾರೆ. ಹಲವು ಹಾಲಿ ಶಾಸಕರನ್ನು ಬದಲಾವಣೆ ಮಾಡಿದಾಗ ಬಂಡಾಯ ಸಹಜ. ಎರಡು ಮೂರು ದಿನಗಳಲ್ಲಿ ಎಲ್ಲವೂ ಶಮನವಾಗುತ್ತದೆ. ಸದ್ಯದಲ್ಲಿಯೇ ಈ ಕೊನೆಯ ಪಟ್ಟಿ ಬಿಡುಗಡೆಯಾಗಲಿದೆ ಎಂದರು.

ಚುನಾವಣೆ ಎಂದರೆ ಕುಸ್ತಿ ಕಣ ನನ್ನ ಕ್ಷೇತ್ರದಲ್ಲಿ ಎದುರಾಳಿ ಯಾರೇ ಬರಲಿ, ಪ್ರತಿಸ್ಪರ್ಧಿ ಗಟ್ಟಿಯಾಗಿದ್ದರೆ ಚುನಾವಣೆ ಚೆನ್ನಾಗಿ ನಡೆಯುತ್ತದೆ. ನನ್ನ ವಿಶ್ವಾಸ ನನ್ನ ಕ್ಷೇತ್ರದ ಜನರ ಮೇಲಿದೆ. ಹತ್ತು ಹಲವರು ಪೈಪೋಟಿ ಮಾಡಿದರು, ಜನರು ನನಗೆ ಬೆಂಬಲ ಕೊಡುತ್ತಾರೆ. ಏಪ್ರಿಲ್ 19 ರಂದು ಇನ್ನೊಂದು ಬಾರಿ ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ಆಗ ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಅವರು ಆಗಮಿಸಲಿದ್ದಾರೆ ಎಂದರು.

ಆರೋಪ ಸಾಬೀತುಪಡಿಸಲಿ:

ನೆಹರು ಓಲೇಕಾರ ನನ್ನ ಮೇಲೆ ಆರೋಪ ಮಾಡಿದ್ದನ್ನು ಸಾಬೀತು ಮಾಡಲಿ. ನಾನು ಎಲ್ಲದಕ್ಕೂ ಸಿದ್ದನಿದ್ದೇನೆ. ಆದರೆ, ಓಲೇಕಾರ ಅವರು ಅವರ ಮೇಲಿರುವ ಆರೋಪಗಳ ಬಗ್ಗೆ ಮೊದಲು ಸ್ಪಷ್ಠೀಕರಣ ಕೊಡಲಿ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ