10:01 AM Friday 19 - December 2025

ರೇಣುಕಾಸ್ವಾಮಿ ಮೆಸೇಜ್ ಬಗ್ಗೆ ದರ್ಶನ್ ಗೆ ಹೇಳಿ ತಪ್ಪು ಮಾಡಿದೆ: ಪವಿತ್ರಾ ಗೌಡ ಪಶ್ಚಾತಾಪದ ಮಾತುಗಳು

pavithra gowda
12/06/2024

ಬೆಂಗಳೂರು:  ರೇಣುಕಾಸ್ವಾಮಿ ಮೆಸೇಜ್ ಬಗ್ಗೆ ದರ್ಶನ್ ಗೆ ಹೇಳಿ ತಪ್ಪು ಮಾಡಿದೆ ಎಂದು ಪೊಲೀಸರ ಮುಂದೆ ಪವಿತ್ರಗೌಡ ಅಳಲು ತೋಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ರೇಣುಕಾಸ್ವಾಮಿ ಕಳಿಸಿದ ಅಶ್ಲೀಲ ಮೆಸೇಜ್ ತೋರಿಸಿ ಘಟನೆ ಬಗ್ಗೆ ಹೇಳಿದ್ದರಿಂದ ಇಷ್ಟೆಲ್ಲ ಆಗಿದೆ. ಇದರ ಬದಲು ನಾನೇ ಪೊಲೀಸರಿಗೆ ದೂರು ನೀಡಬಹುದಿತ್ತು ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಇದು ಕೊಲೆಯಾಗುವ ಹಂತಕ್ಕೆ ಹೋಗುತ್ತೆ ಅಂತ ಅಂದುಕೊಂಡಿರಲಿಲ್ಲ  ಎಂದು ಪವಿತ್ರಾ ಗೌಡ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ ಎಂದು ಹೇಳಿದ್ದಾರೆ

ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿ ಎಂದು ಹೇಳಲಾಗುತ್ತಿದೆ. ಪ್ರಕರಣ ಸಂಬಂಧ ನಟ ದರ್ಶನ್ ಬಂಧನದ ಬೆನ್ನಲ್ಲೇ ಪೊಲೀಸರು ಪವಿತ್ರಾ ಗೌಡಾರನ್ನು ಕೂಡ ಬಂಧಿಸಿದ್ದರು. ಇದಾದ ಬಳಿಕ ಎಲ್ಲಾ 13 ಮಂದಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. 6 ದಿನ ಪೊಲೀಸ್ ಕಸ್ಟಡಿಗೆ ಕೋರ್ಟ್ ಒಪ್ಪಿಸಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version