ನಾನು ಬಾಂಬೆ ಬಾಯ್ಸ್ ಎಂದು ಹೇಳೇ ಇಲ್ಲ, ಆ ವಾಹಿನಿ ಸುಳ್ಳು ಸುದ್ದಿ ಪ್ರಕಟಿಸಿದೆ: ಈಶ್ವರಪ್ಪ ಕಿಡಿ
‘ನಾನು ಬಾಂಬೆ ಬಾಯ್ಸ್’ ಎಂದು ಎಲ್ಲಿಯೂ ಹೇಳಿಲ್ಲ, ನನ್ನ ಹೇಳಿಕೆಯನ್ನು ತಪ್ಪಾಗಿ ಸುದ್ದಿವಾಹಿನಿಯೊಂದು ಪ್ರಕಟಿಸಿದೆ ಎಂದು ಕೆ.ಎಸ್.ಈಶ್ವರಪ್ಪನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನಿಂದ ವಲಸೆ ಬಂದವರಿಂದ ಬಿಜೆಪಿಯಲ್ಲಿ ಶಿಸ್ತು ಹಾಳಾಯಿತು ಎಂದು ನಾನು ಹೇಳಿಕೆ ನೀಡಿಲ್ಲ, ಆದರೆ ವಾಹಿನಿಯೊಂದು ಹಾಗೆ ಸುಳ್ಳು ಸುದ್ದಿ ಬಿತ್ತರಿಸಿದೆ. ಇದರಿಂದಾಗಿ ಗೊಂದಲ ಸೃಷ್ಟಿಯಾಗಿದೆ ಎಂದು ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು.
ಇತ್ತೀಚಿನ ಬೆಳವಣಿಗೆಯಿಂದ ನನಗೆ ನೋವಾಗಿದೆ, ಆದರೆ ಅವರಿಂದಲೇ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದನ್ನು ಹೇಗೆ ಮರೆಯಲಿ, ಆಗ ನಾನು ಕೂಡ ಕ್ಯಾಬಿನೆಟ್ ಸಚಿವನಾಗಿದ್ದೆ ಎಂದರಲ್ಲದೇ, ಈ ಬಗ್ಗೆ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಈಶ್ವರಪ್ಪ ಹೇಳಿದ್ರು…
ಇನ್ನೂ ಕಾಂಗ್ರೆಸ್ ಅಶಿಸ್ತು ಸಂಸ್ಕೃತಿ ಬಿಜೆಪಿಗೂ ವ್ಯಾಪಿಸಿದೆ, ರಾಜ್ಯದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಅಸಮಾಧಾನವಿದೆ, ಸಮಸ್ಯೆಗಳನ್ನು ಪಕ್ಷದಲ್ಲೇ ಬಗೆಹರಿಸಿಕೊಳ್ಳುವುದಾಗಿ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























