ನಾನು ಸಹಾಯ ಮಾಡಲು ಪ್ರಯತ್ನಿಸಿದೆ, ಆದ್ರೆ ಇದನ್ನು ನಿರೀಕ್ಷಿಸಿರಲಿಲ್ಲ: ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ

ಬೆಂಗಳೂರು: ನನ್ನ ಮೇಲೆ ಮಹಿಳೆಯೊಬ್ಬರು ನೀಡಿರುವ ದೂರು, ಈ ಆರೋಪ ನಿರಾಧಾರವಾಗಿದೆ ಎಂದು ಮಾಜಿ ಸಿಎಂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ತಮ್ಮ ಮೇಲಿನ ಆರೋಪ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಯಾರೋ ಒಬ್ಬ ಹೆಣ್ಣು ಮಗಳು ಅನ್ಯಾಯವಾಗಿದೆ ಎಂದು ನನ್ನ ಬಳಿ ಬಂದಿದ್ದರು. ತಾಯಿ- ಮಗಳು ಅನೇಕ ಬಾರಿ ಬಂದು ಹೋಗುತ್ತಿದ್ದರು. ಹೀಗೆ ಬಂದವರ ಬಳಿ ಏನಾಗಿದೆ ಎಂದು ಕೇಳಿದೆ. ಈ ವೇಳೆ ಅವರು ಅನ್ಯಾಯವಾಗಿದೆ ಎಂದು ಹೇಳಿದರು.
ಹೀಗಾಗಿ ನಾನು ಪೊಲೀಸರಿಗೆ ಕರೆ ಮಾಡಿ ನ್ಯಾಯ ಒದಗಿಸುವಂತೆ ಹೇಳಿದೆ. ಆದರೆ, ಮಹಿಳೆ ನನ್ನ ಮೇಲೆಯೇ ಏನೇನೋ ಮಾತಾಡೋಕೆ ಶುರು ಮಾಡಿದಳು ಎಂದು ಹೇಳಿದ್ದಾರೆ.
ನಾನು ಸಹಾಯ ಮಾಡಲು ಪ್ರಯತ್ನಿಸಿದೆ. ಆದರೆ, ಅವರು ನನ್ನ ವಿರುದ್ಧವೇ ಆರೋಪ ಮಾಡಿದ್ದಾರೆ. ಇದನ್ನು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth