ಮೋದಿಯನ್ನು ಅಧಿಕಾರದಿಂದ ಇಳಿಸುವವರೆಗೂ ನಾನು ಸಾಯಲ್ಲ: ಮಲ್ಲಿಕಾರ್ಜುನ ಖರ್ಗೆ
ಜಮ್ಮು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಇಳಿಸುವವರೆಗೂ ನಾನು ಸಾಯುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಖರ್ಗೆ ಏಕಾಏಕಿ ಅಸ್ವಸ್ಥರಾಗಿದ್ದರು. ಬಳಿಕ ಕೆಲಹೊತ್ತಿನ ನಂತರ ಚೇತರಿಸಿಕೊಂಡ ಅವರು, ನನಗೆ 83 ವರ್ಷ ವಯಸ್ಸು, ಆದರೆ ನಾನು ಇಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ” ಎಂದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಎಂದಿಗೂ ಬಯಸಿರಲಿಲ್ಲ ಎಂದು ಹೇಳಿದ ಖರ್ಗೆ, “ಒಂದೊಮ್ಮೆ ಅವರು ಚುನಾವಣೆ ನಡೆಸಲು ಬಯಸಿದ್ದರೆ ಒಂದೆರಡು ವರ್ಷಗಳಲ್ಲಿಯೇ ಅದನ್ನು ಮಾಡುತ್ತಿದ್ದರು. ಸುಪ್ರೀಂ ಕೋರ್ಟ್ ಆದೇಶದ ನಂತರ ಅವರು ಚುನಾವಣೆಗೆ ತಯಾರಿ ಪ್ರಾರಂಭಿಸಿದರು. ಅವರಿಗೆ ಚುನಾವಣೆ ಬೇಕಿರಲಿಲ್ಲ. ಅವರು ಲೆಫ್ಟಿನೆಂಟ್ ಗವರ್ನರ್ ಮೂಲಕ ರಿಮೋಟ್ ಕಂಟ್ರೋಲ್ ಸರ್ಕಾರವನ್ನು ನಿರ್ವಹಿಸಲು ಬಯಸಿದ್ದರು.” ಎಂದು ವಾಗ್ದಾಳಿ ನಡೆಸಿದರು.
ಕಳೆದ 10 ವರ್ಷಗಳಲ್ಲಿ ಪ್ರಧಾನಿ ಮೋದಿ ದೇಶದ ಯುವಕರಿಗೆ ಏನನ್ನೂ ನೀಡಿಲ್ಲ ಎಂದು ಆರೋಪಿಸಿದ ಖರ್ಗೆ, 10 ವರ್ಷಗಳಲ್ಲಿ ನಿಮ್ಮ ಸಮೃದ್ಧಿಯನ್ನು ಮರಳಿ ತರಲು ಸಾಧ್ಯವಾಗದ ವ್ಯಕ್ತಿಯನ್ನು ನೀವು ನಂಬಬಹುದೇ? ಬಿಜೆಪಿ ನಾಯಕರು ನಿಮ್ಮ ಮುಂದೆ ಬಂದರೆ, ಅವರು ಸಮೃದ್ಧಿಯನ್ನು ತಂದಿದ್ದಾರೆಯೇ ಅಥವಾ ಇಲ್ಲವೇ ಎಂದು ಅವರನ್ನು ಕೇಳಿ ಎಂದು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj




























