ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ತಲೆಬೋಳಿಸಿಕೊಳ್ಳುತ್ತೇನೆ: ಎಎಪಿ ಅಭ್ಯರ್ಥಿ ಸವಾಲು - Mahanayaka

ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ತಲೆಬೋಳಿಸಿಕೊಳ್ಳುತ್ತೇನೆ: ಎಎಪಿ ಅಭ್ಯರ್ಥಿ ಸವಾಲು

somnath bharti
02/06/2024

ಚುನಾವಣೋತ್ತರ ಸಮೀಕ್ಷೆ ಸುಳ್ಳು. ಒಂದು ವೇಳೆ ನಿಜವಾದರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಆಮ್​ ಆದ್ಮಿ ಪಕ್ಷದ ಅಭ್ಯರ್ಥಿ ಸೋಮನಾಥ್​ ಭಾರ್ತಿ ಹೇಳಿದ್ದಾರೆ.


Provided by

ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ಪ್ರಸಾರವಾಗಿರುವ ಚುನಾವಣೋತ್ತರ ಸಮೀಕ್ಷೆಯಲ್ಲಿ ಎನ್ ​ಡಿಎ ಬಹುಮತ ಪಡೆಯಲಿದೆ ಎಂಬುದನ್ನು ತೋರಿಸಿದೆ. ಈ ಕುರಿತು ಮಾತನಾಡಿದ ಸೋಮನಾಥ್​ ಭಾರ್ತಿ, ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ನಾನು ನನ್ನ ತಲೆ ಬೋಳಿಸಿಕೊಳ್ಳುತ್ತೇನೆ. ನನ್ನ ಮಾತನ್ನು ನೆನಪಿನಲ್ಲಿಟ್ಟುಕೊಳ್ಳಿ. ಜೂನ್​ 4 ರಂದು ಫಲಿತಾಂಶ ತಲೆಕೆಳಕಾಗುತ್ತದೆ ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ ಎಂದರು.

ದೆಹಲಿಯ ಎಲ್ಲಾ ಏಳು ಸ್ಥಾನಗಳನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ. ಮೋದಿಯ ಭಯದಿಂದಾಗಿ ಎಕ್ಸಿಟ್ ಪೋಲ್‌ಗಳು ಸೋಲುವುದನ್ನು ತೋರಿಸಲು ಸಾಧ್ಯವಿಲ್ಲ ಎಂದರು. ಜೂನ್ 4 ರಂದು ನಿಜವಾದ ಫಲಿತಾಂಶ ಬರುವವರೆಗೆ ನಾವೆಲ್ಲರೂ ಕಾಯಬೇಕು. ಜನರು ಬಿಜೆಪಿ ವಿರುದ್ಧ ಭಾರಿ ಮತ ಹಾಕಿದ್ದಾರೆ ಎಂದು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ