5 ಸಾವಿರಕ್ಕಿಂತ ಹೆಚ್ಚು ಬ್ಯಾಂಕಿಂಗ್ ಹುದ್ದೆಗಳು: ಅರ್ಜಿ ಸಲ್ಲಿಸುವುದು ಹೇಗೆ?
ಬ್ಯಾಂಕ್ ಸಿಬ್ಬಂದಿ ಆಯ್ಕೆ ಸಂಸ್ಥೆಯು ಪ್ರತಿವರ್ಷದಂತೆ ಈ ವರ್ಷವೂ ಕೂಡ ಭರ್ಜರಿ 4,000 ಕ್ಕಿಂತ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
IBPS PO Recruitment 2024 — ಪ್ರೊಬೆಶನರಿ ಆಫೀಸರ್ ಹಾಗೂ ಮ್ಯಾನೇಜ್ಮೆಂಟ್ ಟ್ರೈನ್ ಹುದ್ದೆಗಳನ್ನು ಸೇರಿ ಒಟ್ಟು 5000 ಕ್ಕಿಂತ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಯಲ್ಲಿ ಯಾವೆಲ್ಲ ಬ್ಯಾಂಕುಗಳಲ್ಲಿ ಹುದ್ದೆಗಳು ಖಾಲಿ ಇವೆ? ಯಾರು ಅರ್ಜಿ ಸಲ್ಲಿಸಬಹುದು? ಹೇಗೆ ಅರ್ಜಿ ಸಲ್ಲಿಸಬೇಕಾದ ಎಂಬ ಮಾಹಿತಿ ಇಲ್ಲಿದೆ…
ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ವಿವರ :
ಕರ್ನಾಟಕ ರಾಜ್ಯದ ಕೆನರಾ ಬ್ಯಾಂಕ್ ಸೇರಿದಂತೆ ದೇಶದ ಒಟ್ಟು 11 ಬ್ಯಾಂಕುಗಳಲ್ಲಿ ಈ ಹುದ್ದೆಗಳು ಖಾಲಿ ಇದ್ದು, ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ ಸೇರಿದ ಒಟ್ಟು 11 ಬ್ಯಾಂಕುಗಳು ಇದರಲ್ಲಿ ಪಾಲ್ಗೊಂಡಿವೆ. ಈ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಗಿನಂತಿದೆ.
* ಪ್ರೊಬೆಶನರಿ ಅಧಿಕಾರಿ ಹಾಗೂ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳು – 4,455 ಹುದ್ದೆಗಳು
* ಸ್ಪೆಷಲಿಸ್ಟ್ ಕೆಡರ್ ಹುದ್ದೆಗಳು – 896 ಹುದ್ದೆಗಳು
ಶೈಕ್ಷಣಿಕ ಅರ್ಹತೆಗಳು / Educational Qualification
ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ವಿಜ್ಞಾನ ವಿಷಯದಲ್ಲಿ, ತಂತ್ರಜ್ಞಾನ, ಕಂಪ್ಯೂಟರ್ ಸೈನ್ಸ್, ಅಗ್ರಿಕಲ್ಚರಲ್, ಕಾನೂನು ಸೇರಿದಂತೆ ವಿವಿಧ ವಿಷಯಗಳಲ್ಲಿ ಪದವಿ ಮುಗಿಸಿರುವವರು ಈ ಬ್ಯಾಂಕಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ ಅರ್ಹತೆಗಳು: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷದ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು. ವಿವಿಧ ಮೀಸಲಾತಿ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ರಿಂದ 10 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ : Application Fee Details
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳು 175 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಇನ್ನುಳಿದ ವರ್ಗದ ಅಭ್ಯರ್ಥಿಗಳು ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು 850 ರೂ. ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ? Selection Procedure
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಮೊದಲು ಪೂರ್ವಬಾವಿ ಪರೀಕ್ಷೆ ನಡೆಸಲಾಗುತ್ತದೆ (Preliminary exam), ಇದರಲ್ಲಿ ಉತ್ತಮ ಅಂಕ ಗಳಿಸಿದ ಅಭ್ಯರ್ಥಿಗಳಿಗೆ ನಂತರದಲ್ಲಿ ಮುಖ್ಯ ಪರೀಕ್ಷೆ ನಡೆಸಿ ಹಾಗು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಕರ್ನಾಟಕದಲ್ಲಿರುವ ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಬೆಳಗಾವಿ ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ — ಬ್ಯಾಂಕಿಂಗ್ ನೇಮಕಾತಿಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 21, 2024 ಕೊನೆಯ ದಿನಾಂಕವಾಗಿರುತ್ತದೆ.
ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಜಾಲತಾಣ : https://www.ibps.in/
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: