ಭಾರತ – ಪಾಕಿಸ್ತಾನದ ಟಿ20 ವಿಶ್ವಕಪ್ ಪಂದ್ಯಕ್ಕೆ ಬೆದರಿಕೆ: ಬಿಗಿ ಭದ್ರತೆ

ನ್ಯೂಯಾರ್ಕ್ ನ ಐಶನ್ ಹೋವರ್ ಪಾರ್ಕ್ ನಲ್ಲಿ ಜೂನ್ 9ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಟಿ-20 ವಿಶ್ವಕಪ್ ಪಂದ್ಯಕ್ಕೆ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣಕ್ಕೆ ಬಿಗಿ ಭದ್ರತೆ ಒದಗಿಸಲಾಗುತ್ತಿದೆ. ನ್ಯೂಯಾರ್ಕ್ ನಲ್ಲಿ ಭಾರತ ಉಪ ಖಂಡದ ನಿವಾಸಿಗಳು ನೆಲೆಸಿರುವುದರಿಂದ ಭಾರತ ಮತ್ತು ಪಾಕ್ ಪಂದ್ಯಕ್ಕೆ ಭಾರೀ ಪ್ರೇಕ್ಷಕರ ನಿರೀಕ್ಷೆ ಇದೆ.
ಇದೇ ಪ್ರಥಮ ಬಾರಿಗೆ ಅಮೆರಿಕಾವು ವೆಸ್ಟ್ ಇಂಡೀಸ್ ನೊಂದಿಗೆ ಟಿ-20 ವಿಶ್ವಕಪ್ ಆತಿಥ್ಯ ವಹಿಸುತ್ತಿದೆ., ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಎಂಟು ಪಂದ್ಯಗಳು ನಡೆಯಲಿವೆ. ಈ ಪೈಕಿ ಜೂನ್ 9ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯವೂ ಸೇರಿದೆ.
ನ್ಯೂಯಾರ್ಕ್ ನಲ್ಲಿ ದೊಡ್ಡ ಪ್ರಮಾಣದ ಭಾರತ ಉಪ ಖಂಡದ ನಿವಾಸಿಗಳು ನೆಲೆಸಿರುವುದರಿಂದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಭಾರಿ ಸಂಖ್ಯೆಯ ಪ್ರೇಕ್ಷಕರು ಆಗಮಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯಗಳು ಯಾವಾಗಲೂ ದೊಡ್ಡ ಸಂಖ್ಯೆಯ ಪ್ರೇಕ್ಷಕರನ್ನು ಆಕರ್ಷಿಸುವುದರಿಂದ, ಎ ಗುಂಪಿನ ಈ ಎರಡು ತಂಡಗಳ ನಡುವಿನ ಪಂದ್ಯವು ರೋಚಕ ಹಣಾಹಣಿಗೆ ಸಾಕ್ಷಿಯಾಗಲಿದೆ .
ಈ ನಡುವೆ, ಭದ್ರತಾ ಬೆದರಿಕೆಯ ಕುರಿತು ನಾವು ಪ್ರಾಧಿಕಾರಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದೇವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಹೇಳಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth