ಛತ್ರಪತಿ ಶಿವಾಜಿ ಮಹಾರಾಜರು ನಮ್ಮ ಆರಾಧ್ಯ ದೈವ: ರಾಹುಲ್ ಗಾಂಧಿ ಅಚ್ಚರಿಯ ಹೇಳಿಕೆ - Mahanayaka
2:27 AM Wednesday 20 - August 2025

ಛತ್ರಪತಿ ಶಿವಾಜಿ ಮಹಾರಾಜರು ನಮ್ಮ ಆರಾಧ್ಯ ದೈವ: ರಾಹುಲ್ ಗಾಂಧಿ ಅಚ್ಚರಿಯ ಹೇಳಿಕೆ

05/10/2024


Provided by

ಜನರನ್ನು ಹೆದರಿಸಿ, ಸಾಂವಿಧಾನಿಕ ಸಂಸ್ಥೆಗಳನ್ನು ಧ್ವಂಸಗೊಳಿಸಿ ಅನಂತರ ಶಿವಾಜಿ ಮಹಾರಾಜರ ಮುಂದೆ ತಲೆಬಾಗಿ ಯಾವುದೇ ಪ್ರಯೋಜನವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಸರ್ಕಾರ ಪ್ರಧಾನಿ ಮೋದಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೊಲ್ಹಾಪುರದಲ್ಲಿ ಮರಾಠ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿಯ ಪ್ರತಿಮೆಯನ್ನು ರಾಹುಲ್ ಗಾಂಧಿ ಶನಿವಾರ ಅನಾವರಣಗೊಳಿಸಿದರು.

ಪ್ರತಿಮೆಯನ್ನು ಅನಾವರಣಗೊಳಿಸುವ ಮೊದಲು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್ ಕೋಟೆಯಲ್ಲಿ ಶಿವಾಜಿ ಪ್ರತಿಮೆಯ ಕುಸಿತದ ಬಗ್ಗೆ ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡು, ಬಿಜೆಪಿಯ ಸಿದ್ಧಾಂತ ಸರಿಯಿಲ್ಲ ಎಂದು ಹೇಳಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಒಂದು ಹೆಸರಲ್ಲ ಅಥವಾ ರಾಜನಲ್ಲ. ನಮಗೆ ಅವರು ನಮ್ಮ ಆರಾಧ್ಯ ದೈವ. ಇಂದು ನಾನು ಅವರ ಪಾದಗಳಿಗೆ ತಲೆಬಾಗಿ ನನ್ನ ದೇವರಲ್ಲಿ ಕ್ಷಮೆಯಾಚಿಸುತ್ತೇನೆ” ಎಂದು ಆಗಸ್ಟ್ 30 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮೋದಿ ಹೇಳಿದ್ದರು. ಆಗಸ್ಟ್ 26 ರಂದು ಬಿದ್ದ 35 ಅಡಿ ಪ್ರತಿಮೆಯನ್ನು 2023 ರ ಡಿಸೆಂಬರ್ 4 ರಂದು ನೌಕಾಪಡೆಯ ದಿನದ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ಅನಾವರಣಗೊಳಿಸಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ