ಇಡ್ಲಿ ತಿನ್ನುವ ಸ್ಪರ್ಧೆ: ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿಯ ದಾರುಣ ಸಾವು

ಪಾಲಕ್ಕಾಡ್: ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿಯೊಬ್ಬರು ಗಂಟಲಲ್ಲಿ ಇಡ್ಲಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ.
ಪಾಲಕ್ಕಾಡ್ ನ ಅಲಮರಮ್ ನಿವಾಸಿ ಸುರೇಶ್ (49) ಮೃತಪಟ್ಟವರಾಗಿದ್ದಾರೆ. ಶನಿವಾರ ಇಲ್ಲಿನ ವಳಯಾರ್ ನಲ್ಲಿ ಓಣಂ ಹಬ್ಬದ ಪ್ರಯುಕ್ತ ಸ್ಥಳೀಯ ಸಂಘಟನೆಯೊಂದು ಇಡ್ಲಿ ತಿನ್ನುವ ಸ್ಪರ್ಧೆ ಆಯೋಜಿಸಿತ್ತು.
ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಆತುರಾತುರವಾಗಿ ಇಡ್ಲಿ ತಿನ್ನುತ್ತಿದ್ದ ವೇಳೆ ಗಂಟಲಲ್ಲಿ ಇಡ್ಲಿ ಸಿಲುಕಿಕೊಂಡಿದೆ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಸುರೇಶ್ ಸುರೇಶ್ ಮೃತಪಟ್ಟಿದ್ದಾರೆ.
ವರದಿಗಳ ಪ್ರಕಾರ ಸುರೇಶ್ ಅವರು ಮೂರು ಇಡ್ಲಿಗಳನ್ನು ಏಕಕಾಲದಲ್ಲಿ ತಿಂದಿದ್ದರು. ಹೀಗಾಗಿ ಇಡ್ಲಿ ಗಂಟಲಲ್ಲಿ ಸಿಕ್ಕಿಹಾಕಿಕೊಂಡಿದೆ ಎಂದು ತಿಳಿದು ಬಂದಿದೆ.
ಸದ್ಯ ಘಟನೆ ಸಂಬಂಧ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj