ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶೇ.50ರಷ್ಟು ಉದ್ಯೋಗಗಳು ಮಹಿಳೆಯರಿಗೆ ಮೀಸಲು: ರಾಹುಲ್ ಗಾಂಧಿ ಘೋಷಣೆ

rahul gandhi
29/03/2024

ದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ,  ಶೇ.50ರಷ್ಟು ಉದ್ಯೋಗಗಳನ್ನು ಮಹಿಳೆಯರಿಗೆ ಮೀಸಲಿಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶುಕ್ರವಾರ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ದೇಶವನ್ನು ನಡೆಸುವ ಸರ್ಕಾರದಲ್ಲಿ ಮಹಿಳೆಯರಿಗೆ ಸಮಾನ ಕೊಡುಗೆ ನೀಡಿದಾಗ ಮಾತ್ರ ಮಹಿಳೆಯರ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಾಗುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸುರಕ್ಷಿತ ಆದಾಯ, ಭವಿಷ್ಯ, ಸ್ಥಿರತೆ ಮತ್ತು ಸ್ವಾಭಿಮಾನ ಹೊಂದಿರುವ ಮಹಿಳೆಯರು ನಿಜವಾಗಿಯೂ ಸಮಾಜದ ಶಕ್ತಿಯಾಗುತ್ತಾರೆ. 50 ರಷ್ಟು ಸರ್ಕಾರಿ ಹುದ್ದೆಗಳಲ್ಲಿ ಮಹಿಳೆಯರು ಇರುವುದು ದೇಶದ ಪ್ರತಿಯೊಬ್ಬ ಮಹಿಳೆಗೆ ಶಕ್ತಿ ನೀಡುತ್ತದೆ. ಶಕ್ತಿಯುತ ಮಹಿಳೆಯರು ಭಾರತದ ಭವಿಷ್ಯವನ್ನು ಬದಲಾಯಿಸುತ್ತಾರೆ ಎಂದು ರಾಹುಲ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಎಲ್ಲಾ ಹೊಸ ನೇಮಕಾತಿಗಳಲ್ಲಿ 50 ಪ್ರತಿಶತವನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ ಸೇರಿದಂತೆ ಹಲವು ಕೊಡುಗೆಗಳನ್ನು ಕಾಂಗ್ರೆಸ್ ನೀಡುವುದಾಗಿ ಅವರು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version