ಜನಗಣ ಮನ ದೇಶದ ಗೀತೆಯಾದರೆ, ಗಾಯತ್ರಿ ಮಂತ್ರ ಬ್ರಹ್ಮ ಗೀತೆ: ಪೇಜಾವರ ಸ್ವಾಮೀಜಿ

ಉಡುಪಿ: ಜನಗಣ ಮನವು ದೇಶದ ಗೀತೆಯಾದರೆ, ಗಾಯತ್ರಿ ಮಂತ್ರವು ಬ್ರಹ್ಮ ಗೀತೆ’. ದೇಶದ ಎಲ್ಲ ಪ್ರಜೆಗಳಿಗೆ ಸದ್ಬುದ್ಧಿಯನ್ನು ಕೊಡುವಂತೆ ಪ್ರಾರ್ಥಿಸುವುದು.ಕಿತ್ತಳೆ ಹಣ್ಣಿನಲ್ಲಿ ತೊಳೆಗಳು ಒಂದಕ್ಕೊಂದು ಪೂರಕವಾಗಿರುವಂತೆ, ಬ್ರಾಹ್ಮಣ ಸಮಾಜದ ಎಲ್ಲ ಶಾಖೆಗಳೂ ತಮ್ಮ ಮತ ಬೇರೆಯಾದರೂ ಒಂದಕ್ಕೊಂದು ಪೂರಕವಾಗಿರಬೇಕು ಎಂದು ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ(ರಿ) ಇದರ ವತಿಯಿಂದ, ಶ್ರೀಪಾದರ ಅರವತ್ತರ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆಯನ್ನು ಸ್ವೀಕರಿಸಿ ಅವರು ಮಾತನಾಡಿದರು.
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಶರಾದ ಮಂಜುನಾಥ ಉಪಾಧ್ಯರು ಅಧ್ಯಕ್ಷತೆಯನ್ನು ವಹಿಸಿದ್ದರು.ಅಭ್ಯಾಗತರಾಗಿ ವಿಶ್ವ ಹಿಂದೂ ಪರಿಷತ್ ನ ರಾಜ್ಯಾಧ್ಯಕ್ಷರಾದ ಡಾ.ಎಂ.ಬಿ.ಪುರಾಣಿಕ್, ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಸುಬ್ರಹ್ಮಣ್ಯ ಎಡಪಡಿತ್ತಾಯ, ಶ್ರೀಕ್ಷೇತ್ರ ಹೊರನಾಡು ಧರ್ಮದರ್ಶಿಗಳಾದ ಜಿ.ಭೀಮೇಶ್ವರ ಜೋಶಿ,ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿವೃತ್ತ ನಿರ್ದೇಶಕರಾದ ಎಂ.ಆರ್.ವಾಸುದೇವ, ಉಡುಪಿ ನಗರಸಭಾ ಸದಸ್ಯರಾದ ಕೃಷ್ಣರಾವ್ ಕೊಡಂಚ ಮೊದಲಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw