ರಾಮನಗರ ಜಿಲ್ಲೆಗೆ ಮರುನಾಮಕರಣವಾದರೆ ಈ ಹೆಸರು ಆಯ್ಕೆಯಾಗುತ್ತಾ? | ಅಷ್ಟಕ್ಕೂ ಮರುನಾಮಕರಣ ಯಾಕೆ?

ramanagara
10/07/2024

ಬೆಂಗಳೂರು:  ರಾಮನಗರ ಜಿಲ್ಲೆಗೆ ಹೊಸ ಹೆಸರು ಇರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಭಾರೀ ಚರ್ಚೆಗಳು ರಾಜಕೀಯ ವಾದ ಪ್ರತಿವಾದಗಳು ನಡೆಯುತ್ತಿವೆ. ಇದರ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಾಯಕರ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದು, ರಾಮನಗರಕ್ಕೆ ಹೊಸ ಹೆಸರು ಇಡುವಂತೆ ಮನವಿ ಸಲ್ಲಿಸಲಾಗಿದೆ.

ವರದಿಗಳ ಪ್ರಕಾರ, ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.  ಬೆಂಗಳೂರಿನ ಉಪನಗರಗಳಾಗಿ ಕಾರ್ಯನಿರ್ವಹಿಸುವ ಪ್ರದೇಶಗಳಲ್ಲಿ ಆಸ್ತಿ ಬೆಲೆಗಳನ್ನು ಹೆಚ್ಚಿಸಬಹುದು ಇದರ ಮುಖ್ಯ ಉದ್ದೇಶವಾಗಿದೆ ಎನ್ನುವುದು ಡಿ.ಕೆ.ಶಿವಕುಮಾರ್ ಅವರು ಪ್ರಸ್ತಾಪವಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣವಾಗುವ ಜಿಲ್ಲೆ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡಿರುತ್ತದೆ. ಜಿಲ್ಲೆಯು ರಾಮನಗರವನ್ನು ತನ್ನ ಕೇಂದ್ರವಾಗಿ ಹೊಂದಿರುತ್ತದೆ. ಬೆಂಗಳೂರಿನ ಜಾಗತಿಕ ಖ್ಯಾತಿ, ಸಾರ್ವಭೌಮತೆ ಮತ್ತು ಕೀರ್ತಿ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಮತ್ತು ಹಾರೋಹಳ್ಳಿ ತಾಲೂಕುಗಳಿಗೆ ಉಪಯೋಗವಾಗಬೇಕು ಎಂಬುದು ಜನರ ಆಶಯ ಮತ್ತು ನಮ್ಮ ಯೋಜನೆಯಾಗಿದೆ ಎಂದು ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.

ಹೊಸ ಜಿಲ್ಲೆಯನ್ನು ರಚಿಸುವುದು ಗುರಿಯಲ್ಲ, ಆದರೆ ನಮ್ಮ ಗುರುತನ್ನು ಉಳಿಸಿಕೊಳ್ಳಲು ಬಯಸುತ್ತಿದ್ದೇವೆ. ಈ ವಿಷಯವನ್ನು ಸಚಿವ ಸಂಪುಟದ ಮುಂದಿಡುವುದಾಗಿ ಡಿ.ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯನವರ ಭೇಟಿಯ ನಂತರ ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version