ಮಂತ್ರಾಕ್ಷತೆಯೇ ಮುಖ್ಯವಾದರೆ ಗ್ಯಾರೆಂಟಿಗಳನ್ನು ರದ್ದು ಮಾಡುವುದು ಉತ್ತಮ: ಕಾಂಗ್ರೆಸ್ ಶಾಸಕ ಹೆಚ್.ಸಿ. ಬಾಲಕೃಷ್ಣ

31/01/2024
ಮಾಗಡಿ: ಜನರಿಗೆ ಗ್ಯಾರೆಂಟಿಗಿಂತ ಮಂತ್ರಾಕ್ಷತೆಯೇ ಮುಖ್ಯವಾದರೆ ಗ್ಯಾರೆಂಟಿಗಳನ್ನು ರದ್ದು ಮಾಡುವುದು ಉತ್ತಮ ಎಂದು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ.
ಮಾಗಡಿ ತಾಲೂಕಿನ ಶ್ರೀಗಿರಿಪುರದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ 5 ಗ್ಯಾರೆಂಟಿಗಳನ್ನು ಕೊಟ್ಟರೂ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯದಿದ್ದರೆ, ಗ್ಯಾರೆಂಟಿಗಳನ್ನು ರದ್ದು ಮಾಡುವುದೇ ಒಳ್ಳೆಯದು ಎಂದು ನಾನು ಮುಖ್ಯಮಂತ್ರಿಯವರಿಗೆ ಹೇಳಿದ್ದೇನೆ ಎಂದು ಅವರು ಹೇಳಿದರು.
ಬಿಜೆಪಿಯ ಧರ್ಮ ರಾಜಕಾರಣದ ಮಂತ್ರಾಕ್ಷತೆ ಬೇಕೋ ಅಥವಾ ಜನಸಾಮಾನ್ಯರ ಜೀವನ ಬದಲಿಸುತ್ತಿರುವ ಕಾಂಗ್ರೆಸ್ ನ ಗ್ಯಾರೆಂಟಿ ಬೇಕೋ ಎಂದು ಜನರೇ ಚುನಾವಣೆಯಲ್ಲಿ ತೀರ್ಮಾನ ಮಾಡಬೇಕು ಎಂದು ಬಾಲಕೃಷ್ಣ ಹೇಳಿದರು.