ರಸ್ತೆ ಗುಂಡಿ ಮುಚ್ಚದಿದ್ದರೆ ಸಸ್ಪೆಂಡ್ ಮಾಡಿ ಮನೆಗೆ ಕಳಿಸಬೇಕಾಗುತ್ತದೆ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಗಡುವು - Mahanayaka
4:23 AM Saturday 27 - September 2025

ರಸ್ತೆ ಗುಂಡಿ ಮುಚ್ಚದಿದ್ದರೆ ಸಸ್ಪೆಂಡ್ ಮಾಡಿ ಮನೆಗೆ ಕಳಿಸಬೇಕಾಗುತ್ತದೆ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಗಡುವು

siddaramaiah
21/09/2025

ಬೆಂಗಳೂರು: ಅಕ್ಟೋಬರ್ 31ರೊಳಗೆ ಬೆಂಗಳೂರಲ್ಲಿ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ಇಲ್ಲವಾದರೆ ಎಂಜಿನಿಯರುಗಳೇ ಹೊಣೆಯಾಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.


Provided by

ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಸಿ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ಇವತ್ತು ಖಡಕ್ ಆಗಿ ಸೂಚನೆ ನೀಡಿದ್ದಾರೆ.

ಒಂದು ತಿಂಗಳೊಳಗೆ ಸರಿ ಪಡಿಸ್ತೀನಿ ಅಂತ ಹೇಳಿದ್ದಾರೆ.‌ ಮಳೆ ಜಾಸ್ತಿ ಆದಾಗ ಗುಂಡಿ ಜಾಸ್ತಿ ಬಿದ್ದಿವೆ. ಇನ್ನು ಮಳೆಗಾಲ ಆರಂಭಕ್ಕೂ ಮೊದಲೇ ರಸ್ತೆ ಸರಿ ಪಡಿಸಬೇಕು ಎಂದು ಹೇಳಿದ್ದೇನೆ. ಐಟಿಬಿಟಿ ಉದ್ಯಮಿಗಳು ಏನು ಹೇಳಿದ್ದಾರೆ ಎಂಬುದು ಮುಖ್ಯವಲ್ಲ. ಅವರ ಜೊತೆಯೂ ಮಾತನಾಡೋಣ. ಬೆಂಗಳೂರಲ್ಲಿ ಒಂದು‌ ಕೋಟಿ 40 ಲಕ್ಷ ಜನ ಇದ್ದಾರಲ್ಲ ಅವರಿಗೆ ಅನಾನುಕೂಲ ಆಗಬಾರದು ಎಂದು ಸ್ಪಷ್ಟಪಡಿಸಿದರು.

ಗುಂಡಿ ಮುಚ್ಚಲು ಒಂದು ತಿಂಗಳ ಗಡುವು ನೀಡುತ್ತೇನೆ. 15 ದಿನಗಳ ಬಳಿಕ ಸಭೆ ನಡೆಸಿ ಪ್ರಗತಿ ಪರಿಶೀಲಿಸುವೆ. ಮೆಟ್ರೊ, ಜಿಬಿಎ, ಜಲ ಮಂಡಳಿ, ಬೆಸ್ಕಾಂ, ಬಿಡಿಎ ನಡುವೆ ಸಮನ್ವಯ ಅಗತ್ಯ. ಜಿಬಿಎ ಮುಖ್ಯ ಆಯುಕ್ತರು ವಾರಕ್ಕೊಮ್ಮೆ ಸಭೆ ನಡೆಸಬೇಕು. ಹಾಳಾಗಿರುವ ನಗರದ ರಸ್ತೆ ಗುಂಡಿಗಳಿಂದ ಜನ ಹೈರಾಣಾಗಿದ್ದು, ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿಗಳು ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಜನರ ಪ್ರತಿನಿತ್ಯದ ಸಂಕಷ್ಟ ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವಾ? ತುರ್ತು ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ವಾರ್ಡ್​​ನ ಎಂಜಿನಿಯರ್​ ಗಳು, ಮುಖ್ಯ ಎಂಜಿನಿಯರ್ ಗಳು ಏನು ಮಾಡುತ್ತಿದ್ದಾರೆ?: ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆ ಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು. ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಗುತ್ತಿಗೆದಾರರೊಂದಿಗೆ ಶಾಮೀಲಾಗದೇ ಒದಗಿಸಿರುವ ಅನುದಾನಕ್ಕೆ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು, ವೈಜ್ಞಾನಿಕವಾದ ಕಾಮಗಾರಿಗಳನ್ನು ಪೂರೈಸಲು ಕ್ರಮ ವಹಿಸಿ ಎಂದು ಸೂಚಿಸಿದರು.

ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ್ಟ. ನಿಮ್ಮಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ನಾಚಿಕೆ ಆಗುವುದಿಲ್ಲವೇ ನಿಮಗೆ?. ಮುಚ್ಚಿರುವ ಗುಂಡಿಗಳೂ ನೆಟ್ಟಗಿಲ್ಲ. ಜನರ ಕಷ್ಟ ನಿಮಗೆ ಗೊತ್ತಾಗುವು‌ದಿಲ್ಲವೇ?. ನಿಮ್ಮನ್ನು ಸಸ್ಪೆಂಡ್ ಮಾಡಿ ಮನೆಗೆ ಕಳಿಸಬೇಕಾಗುತ್ತದೆ. ನೀವು ಎಂಜಿನಿರಿಂಗ್ ಓದಿರೋದು ಏಕೆ?. ಗುಂಡಿ ಮುಚ್ಚಿ ಅಂತ ಕರೆದು ಹೇಳಬೇಕೇ?. ಗುಂಡಿ ಮುಚ್ಚದಿದ್ದರೆ ಎಲ್ಲ ಚೀಫ್ ಇಂಜಿನಿಯರ್ ಗಳ ಅಮಾನತು ಮಾಡಲಾಗುವುದು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ