ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ದಾಖಲು ಮಾಡಿ: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ಮನೆ ಮನೆ ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ನಲ್ಲಿ ದಾಖಲು ಮಾಡಲು ತೊಂದರೆಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಂದಿ ಗಿರಿಧಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆಗೆ ಬಂದಾಗ ಅಥವಾ ಶಿಬಿರದಲ್ಲಿ ಅಥವಾ ಆನ್ ಲೈನ್ ಹೀಗೆ ಯಾವುದಾದರೂ ಒಂದು ವಿಧಾನದಲ್ಲಿ ಪರಿಶಿಷ್ಟ ಜಾತಿಯವರು ತಮ್ಮ ಜಾತಿಯ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಸಮೀಕ್ಷೆ ಮಾಡುವವರು ಮನೆ ಮನೆಗೆ ತೆರಳುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಕೆಲವರು ಜಾತಿ ಬಗ್ಗೆ ಬಹಿರಂಗವಾಗಿ ಹೇಳಿಕೊಳ್ಳಲು ಕೀಳರಿಮೆ ಇದ್ದರೆ ಅಂಥವರು ಆನ್ ಲೈನ್ ನಲ್ಲಿ ಜಾತಿಯ ಹೆಸರನ್ನು ದಾಖಲಿಸಬಹುದು ಎಂದು ಸಿಎಂ ತಿಳಿಸಿದರು.
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. 142 ಜನ ನಮ್ಮ ಪಕ್ಷದವರಿದ್ದಾರೆ. 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು. ಎಲ್ಲರನ್ನು ಮಾಡಲಾಗುವುದಿಲ್ಲ. ಶೇ.15% ಜನರನ್ನು ಮಾತ್ರ ಮಾಡಬಹುದು ಎಂದು ಇದೇ ವೇಳೆ ಪ್ರಶ್ನೆಯೊಂದಕ್ಕೆ ಸಿಎಂ ಉತ್ತರಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD