ದುರಂತ: ದಿಲ್ಲಿ ಐಐಟಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಕಾರಣ ನಿಗೂಢ - Mahanayaka

ದುರಂತ: ದಿಲ್ಲಿ ಐಐಟಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಕಾರಣ ನಿಗೂಢ

02/09/2023

ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ(ಐಐಟಿ ದೆಹಲಿ) ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಗಣಿತ ಮತ್ತು ಕಂಪ್ಯೂಟಿಂಗ್‌ನಲ್ಲಿ ಬಿಟೆಕ್ ಮಾಡುತ್ತಿದ್ದ 21 ವರ್ಷದ ಅನಿಲ್ ಕುಮಾರ್, ಐಐಟಿಯ ವಿಂದ್ಯಾಚಲ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಜೆ 6 ಗಂಟೆ ಸುಮಾರಿಗೆ ಕಿಶನ್‌ಗಢ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಸಂಸ್ಥೆಯ ನಿಯಮಗಳ ಪ್ರಕಾರ, ಕುಮಾರ್ ಅವರು ಜೂನ್‌ನಲ್ಲಿ ಹಾಸ್ಟೆಲ್ ಕೊಠಡಿಯನ್ನು ಖಾಲಿ ಮಾಡಬೇಕಾಗಿತ್ತು.

ಆದರೆ ಕುಮಾರ್ ಕೆಲವು ವಿಷಯಗಳಲ್ಲಿ ಅರ್ಹತೆ ಪಡೆಯಲು ಸಾಧ್ಯವಾಗದ ಕಾರಣ ಆ ವಿಷಯಗಳಲ್ಲಿ ತೇರ್ಗಡೆಯಾಗಲು ಆರು ತಿಂಗಳವರೆಗೆ ಹಾಸ್ಟೆಲ್ ನಲ್ಲಿ ತಂಗಲು ಅವಕಾಶ ನೀಡಲಾಗಿತ್ತು. ಇಲ್ಲಿಯವರೆಗೆ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ