10 ಅನಕೊಂಡ ಹಾವುಗಳನ್ನು ವಿಮಾನದಲ್ಲಿ ಅಕ್ರಮ ಸಾಗಾಟ: ಆರೋಪಿಯ ಬಂಧನ
ಬೆಂಗಳೂರು: 10 ಹಳದಿ ಅನಕೊಂಡ ಹಾವುಗಳನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ ಪ್ರಯಾಣಿಕನನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಬೆಂಗಳೂರು ಕಸ್ಟಮ್ಸ್ ಇಲಾಖೆಯು ಅಧಿಕಾರಿಗಳು ಬ್ಯಾಂಕಾಕ್ ನಿಂದ ಬಂದ ಪ್ರಯಾಣಿಕನ ಲಗೇಜ್ ನಲ್ಲಿ ಅನಕೊಂಡ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಯಾಣಿಕನನ್ನು ಬಂಧಿಸಿದ್ದು, ಘಟನೆ ಸಂಬಂಧ ತನಿಖೆ ನಡೆಯುತ್ತಿದೆ.
ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಹಳದಿ ಬಣ್ಣ ಆನಕೊಂಡ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಶಕ್ಕೆ ನೀಡಲಾಗಿದೆ. ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth




























