ಅಕ್ರಮ ರೋಹಿಂಗ್ಯಾ, ಬಾಂಗ್ಲಾದೇಶಿ ವಲಸಿಗರ ಹೆಚ್ಚಳ ಹಿನ್ನೆಲೆ: ಲೋಕಸಭೆಯಲ್ಲಿ ವಲಸೆ ಮತ್ತು ವಿದೇಶಿಯರ ಮಸೂದೆ ಅಂಗೀಕಾರ - Mahanayaka
3:38 AM Monday 15 - September 2025

ಅಕ್ರಮ ರೋಹಿಂಗ್ಯಾ, ಬಾಂಗ್ಲಾದೇಶಿ ವಲಸಿಗರ ಹೆಚ್ಚಳ ಹಿನ್ನೆಲೆ: ಲೋಕಸಭೆಯಲ್ಲಿ ವಲಸೆ ಮತ್ತು ವಿದೇಶಿಯರ ಮಸೂದೆ ಅಂಗೀಕಾರ

27/03/2025

ಲೋಕಸಭೆಯಲ್ಲಿ ಇಂದು ವಲಸೆ ಮತ್ತು ವಿದೇಶಿಯರ ಮಸೂದೆ – 2025 ಅನ್ನು ಅಂಗೀಕರಿಸಲಾಗಿದೆ. ಪ್ರತಿಪಕ್ಷಗಳ ವಿರೋಧಗಳ ಬೆನ್ನಲ್ಲೇ ಅದನ್ನು ಜೆಪಿಸಿಗೆ ಕಳುಹಿಸುವ ಬೇಡಿಕೆಯನ್ನು ಬದಿಗಿಟ್ಟಿದೆ. ಈ ಮಸೂದೆಯು ಭಾರತಕ್ಕೆ ವಿದೇಶಿಯರ ಪ್ರವೇಶವನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮ ವಲಸಿಗರು ಮತ್ತು ಮ್ಯಾನ್ಮಾರ್ ನಿಂದ ರೋಹಿಂಗ್ಯಾಗಳ ಒಳಹರಿವಿನ ಮಧ್ಯೆ ಈ ಮಸೂದೆಯನ್ನು ತರಲಾಗಿದೆ. ಅಲ್ಲದೇ ಈ ಮಸೂದೆಯು ಪೌರತ್ವ ನೀಡಿಕೆಗೆ ಸಂಬಂಧಿಸಿದ ಯಾವುದೇ ವಿಷಯಗಳಿಗೆ ಸಂಬಂಧಿಸಿಲ್ಲ.


Provided by

ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ ಮತ್ತು ವ್ಯವಹಾರಕ್ಕಾಗಿ ಭಾರತಕ್ಕೆ ಭೇಟಿ ನೀಡುವವರನ್ನು ಸ್ವಾಗತಿಸುತ್ತೇವೆ ಆದರೆ ಕೆಟ್ಟ ಉದ್ದೇಶಗಳೊಂದಿಗೆ ಬರುವವರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ವಲಸೆ ಮತ್ತು ವಿದೇಶಿಯರ ಮಸೂದೆ – 2025 ರ ಮೇಲಿನ ಲೋಕಸಭೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಶಾಸನವು ದೇಶದ ಭದ್ರತೆಯನ್ನು ಬಲಪಡಿಸುತ್ತದೆ ಮತ್ತು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳನ್ನು ಪ್ರೋತ್ಸಾಹಿಸುವುದರ ಜೊತೆಗೆ ಆರ್ಥಿಕತೆ ಮತ್ತು ವ್ಯವಹಾರವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು. ಈ ಶಾಸನವು ದೇಶದ ಭದ್ರತೆಯನ್ನು ಖಚಿತಪಡಿಸುತ್ತದೆ ಮತ್ತು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳನ್ನು ಪ್ರೋತ್ಸಾಹಿಸುವುದರ ಜೊತೆಗೆ ಆರ್ಥಿಕತೆ ಮತ್ತು ವ್ಯವಹಾರವನ್ನು ಹೆಚ್ಚಿಸುತ್ತದೆ ಎಂದು ಶಾ ಹೇಳಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ