ದ್ವೇಷ ಭಾಷಣ ಮಸೂದೆ: ಒಂದು ವರ್ಗವನ್ನು ಗುರಿಯಾಗಿಸಲು ರೂಪಿಸಿದಂತಿದೆ: ಸುರಭಿ ಹೊದಿಗೆರೆ ಕಿಡಿ
ಮಂಗಳೂರು: ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ‘ದ್ವೇಷ ಭಾಷಣ ಮಸೂದೆ’ (Hate Speech Bill) ಅನಗತ್ಯ ಗೊಂದಲಗಳಿಗೆ ಕಾರಣವಾಗುತ್ತಿದೆ ಎಂದು ರಾಜ್ಯ ಬಿಜೆಪಿ ವಕ್ತಾರೆ ಸುರಭಿ ಹೊದಿಗೆರೆ ಟೀಕಿಸಿದ್ದಾರೆ.
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮಸೂದೆಯ ಪ್ರಸ್ತಾಪದ ಅಗತ್ಯವೇ ಇರಲಿಲ್ಲ ಎಂದು ಅಭಿಪ್ರಾಯಪಟ್ಟರು. ಸರ್ಕಾರದ ಈ ನಡೆಯ ಹಿಂದಿನ ಉದ್ದೇಶಗಳ ಬಗ್ಗೆ ಅವರು ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ.
ದ್ವೇಷ ಭಾಷಣ ಮಸೂದೆಯು ಕೇವಲ ಒಂದು ನಿರ್ದಿಷ್ಟ ವರ್ಗವನ್ನು ಗುರಿಯಾಗಿಸಲು ರೂಪಿಸಿದಂತಿದೆ ಎಂದು ಸುರಭಿ ಆರೋಪಿಸಿದರು ಅಲ್ಲದೇ, ಯಾವುದೇ ಮಸೂದೆಯನ್ನು ಜಾರಿಗೆ ತರುವ ಮುನ್ನ ಕಾನೂನು ತಜ್ಞರು ಮತ್ತು ಸಂಬಂಧಪಟ್ಟ ಪ್ರಮುಖರೊಂದಿಗೆ ಸಮಗ್ರವಾಗಿ ಸಾಧಕ–ಬಾಧಕಗಳ ಬಗ್ಗೆ ಚರ್ಚಿಸಬೇಕು. ಆದರೆ ಸರ್ಕಾರ ಏಕಾಏಕಿ ಈ ನಿರ್ಧಾರಕ್ಕೆ ಬಂದಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.
ದುರುಪಯೋಗದ ಭೀತಿ: ಈ ಮಸೂದೆ ಜಾರಿಯಾದರೆ, ಪೊಲೀಸರು ಕಾರ್ಯಕ್ರಮಕ್ಕೆ ಮೊದಲೇ ಭಾಷಣಕಾರರನ್ನು ಬಂಧಿಸುವ ಅಧಿಕಾರ ಪಡೆಯುತ್ತಾರೆ. ಇದು ಮುಕ್ತ ಅಭಿವ್ಯಕ್ತಿಗೆ ಅಡ್ಡಿಯಾಗಬಹುದು ಮತ್ತು ರಾಜಕೀಯವಾಗಿ ದುರುಪಯೋಗವಾಗುವ ಸಾಧ್ಯತೆ ಹೆಚ್ಚು ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಈ ಮಸೂದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಲಿದೆ ಎಂದು ತಿಳಿಸಿದ ಅವರು, ದುರುಪಯೋಗಕ್ಕೆ ಅವಕಾಶವಿರುವ ಇಂತಹ ಕಾನೂನುಗಳು ಜಾರಿಯಾಗಬಾರದು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ಅರುಣ್ ಶೇಟ್, ವಸಂತ್ ಜೆ. ಪೂಜಾರಿ, ಮಾಧವ ಮಾವೆ ಹಾಗೂ ಹೇಮಂತ ಶೆಟ್ಟಿ ದೇರಳಕಟ್ಟೆ ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























