ಹಿಂದೂ ವಿದ್ಯಾರ್ಥಿಗಳ ಮೇಲೆ ಇಸ್ಲಾಂ ಆಚರಣೆಗಳ ಹೇರಿಕೆ ಆರೋಪ: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ
ಉಡುಪಿಯ ಕುಂದಾಪುರ ತಾಲೂಕಿನ ಶಂಕರನಾರಾಯಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಆಯೋಜಿಸಿದ ವಲಯ ಮಟ್ಟದ ಕ್ರೀಡಾಕೂಟ ಇದೀಗ ವಿವಾದಕ್ಕೆ ತುತ್ತಾಗಿದೆ.
ಈ ಕ್ರೀಡಾಕೂಟದಲ್ಲಿ ಬಲವಂತವಾಗಿ ಹಿಂದೂ ಧರ್ಮದ ವಿದ್ಯಾರ್ಥಿನಿಯರನ್ನು ಮುಸ್ಲಿಂ ಆಜಾನ್ ಆಚರಣೆ ಮಾಡಿಸಲಾಗಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿವೆ.
ಇಂದು ಬೆಳಿಗ್ಗೆ ಶಾಲೆಯ ಮುಂಭಾಗ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟದ ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ ಮತದ ಹಾಡುಗಳಿಗೆ ವಿದ್ಯಾರ್ಥಿನಿಯರು ನೃತ್ಯ ಮಾಡಿದ್ದರು.
ಇದೇ ವೇಳೆ ಆಝಾನ್ ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಈ ಸಂಬಂಧ ನಿನ್ನೆಯೇ ಶಾಲಾಡಳಿತ ಕ್ಷಮೆ ಕೇಳಿತ್ತು. ಆದರೆ ಘಟನೆ ಕುರಿತು ಕ್ಷಮೆ ಯಾಚಿಸುವಂತೆ ಹಿಂದೂ ಜಾಗರಣಾ ವೇದಿಕೆ ಇವತ್ತು ಪ್ರತಿಭಟನೆ ನಡೆಸಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka