ಅಸಾಧ್ಯವಾದ ಬೇಡಿಕೆಯನ್ನು ಈಡೇರಿಸಲು ಸಾಧ್ಯವಿಲ್ಲ: ಖಾಸಗಿ ಬಸ್ ಒಕ್ಕೂಟದ ಪ್ರತಿಭಟನೆಗೆ ಸಿಎಂ ಉತ್ತರ

11/09/2023
ಬೆಂಗಳೂರು: ಮಹಿಳೆಯರಿಗೆ ಅನುಕೂಲವಾಗಲಿ ಎಂದು ಶಕ್ತಿ ಯೋಜನೆ ತಂದಿದ್ದೇವೆ. ಇದರಿಂದ ನಷ್ಟ ಆಗ್ತಿದೆ ಎಂದು ಖಾಸಗಿ ಬಸ್ ನವರು ಹೇಳುತ್ತಿದ್ದಾರೆ. ಆದರೆ ಖಾಸಗಿ ಬಸ್ ನವರಿಗೆ ಆಗುತ್ತಿರುವ ನಷ್ಟ ತುಂಬಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಸಾಧ್ಯವಾದ ಬೇಡಿಕೆಯನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಸಿಎಂ, ಬಂದ್ ಮಾಡಲು ಎಲ್ಲರಿಗೂ ಹಕ್ಕಿದೆ, ಪ್ರತಿಭಟನೆಗೆ ಪ್ರಜಾಪ್ರಭುತ್ವದಲ್ಲಿ ಹಕ್ಕಿದೆ. ಆದರೆ ಯಾವುದೇ ತೊಂದರೆಯಾಗದಂತೆ ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ ಎಂದು ಅವರು ಹೇಳಿದ್ದಾರೆ.
ಇನ್ನೂ ಖಾಸಗಿ ಬಸ್ ನವರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ರಾಜಕೀಯ ಪ್ರೇರಿತವಾದದ್ದು ಎಂದು ಹೇಳಿದ್ದಾರೆ.