ಮತ್ತೊಮ್ಮೆ ಮುಸ್ಲಿಂ ವಿರೋಧಿತನ ಬಯಲು: ಸುಳ್ಳು ಹೇಳಿ ಪೇಚಿಗೆ ಸಿಲುಕಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿಯವರು ತನ್ನ ಮುಸ್ಲಿಂ ವಿರೋಧಿ ಮನಸ್ಸನ್ನು ಮತ್ತೊಮ್ಮೆ ಗುಜರಾತಿನಲ್ಲಿ ಬಹಿರಂಗಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಸರಕಾರಿ ಟೆಂಡರ್ ಗಳಲ್ಲಿ ಮುಸ್ಲಿಮರಿಗೆ ವಿಶೇಷ ಕೋಟ ಸೃಷ್ಟಿಸುವುದಾಗಿ ಭರವಸೆ ನೀಡಿದೆ ಎಂಬ ಸುಳ್ಳು ಆರೋಪವನ್ನು ಮಾಡಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯೊಂದು ಅಂಶವು ತುಷ್ಟೀಕರಣ ಮತ್ತು ಓಲೈಕೆಗಳಿಂದ ತುಂಬಿದೆ. ಸರಕಾರಿ ಟೆಂಡರ್ ಗಳಲ್ಲಿ ಅಲ್ಪಸಂಖ್ಯಾತರಿಗೆ ಮತ್ತು ಮುಸ್ಲಿಮರಿಗೆ ನಿಗದಿತ ಕೋಟ ಇರಲಿದೆ ಎಂದು ಅವರು ಲಿಖಿತವಾಗಿ ಹೇಳಿದ್ದಾರೆ. ಹಾಗಾದರೆ ಇನ್ನು ಮುಂದೆ ಸರಕಾರಿ ಗುತ್ತಿಗೆಗಳನ್ನು ಧರ್ಮದ ಆಧಾರದಲ್ಲಿ ನೀಡಲಾಗುತ್ತದೆಯೇ ಮತ್ತು ಅದಕ್ಕಾಗಿ ಮೀಸಲಾತಿಯನ್ನು ತರಲಾಗುತ್ತಿದೆ ಎಂದು ಮೋದಿ ಪ್ರಶ್ನಿಸಿದ್ದಾರೆ.
ಆದರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಂತದ್ದೊಂದು ಹೇಳಿಕೆ ಇಲ್ಲವೇ ಇಲ್ಲ. ಅಲ್ಪಸಂಖ್ಯಾತರಿಗೆ ತಾರತಮ್ಯವಿಲ್ಲದೆ ನ್ಯಾಯಯುತ ಪಾಲನ್ನು ಖಚಿತಪಡಿಸಲಾಗುವುದು ಎನ್ನುವುದು ಮಾತ್ರ ಅದರ ಭರವಸೆಯಾಗಿದೆ. ಆದರೆ ಇದನ್ನೇ ಪ್ರಧಾನಿಯವರು ತಪ್ಪಾಗಿ ವ್ಯಾಖ್ಯಾನಿಸಿ ಸುಳ್ಳು ಹೇಳುತ್ತಿದ್ದಾರೆ ಎಂದು ಗೊತ್ತಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth