ಹರ್ಯಾಣದಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರಲ್ವಾ..? ಆಮ್ ಆದ್ಮಿಯಿಂದ ಅಭ್ಯರ್ಥಿಗಳ ಪಟ್ಟಿ ರಿಲೀಸ್
ಹರ್ಯಾಣದಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಮಾಡಿಕೊಳ್ಳುತ್ತದೆಯೇ ಇಂಡಿಯಾ ಮೈತ್ರಿಕೂಟ..? ಯಾಕಂದ್ರೆ ಕಾಂಗ್ರೆಸ್ ಜೊತೆಗಿನ ಮೈತ್ರಿ ಮಾತುಕತೆ ವಿಫಲವಾಗಿದೆ ಎಂಬ ಸುಳಿವು ಆಮ್ ಆದ್ಮಿ ಪಕ್ಷ ನೀಡಿದೆ. ಅಕ್ಟೋಬರ್ 5ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ (ಎಎಪಿ) ತನ್ನ 20 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ಇದಕ್ಕೂ ಮುನ್ನ ಎಎಪಿಯ ರಾಜ್ಯ ಘಟಕದ ಮುಖ್ಯಸ್ಥ ಸುಶೀಲ್ ಗುಪ್ತಾ ಮಾತನಾಡಿ, ಒಂದು ವೇಳೆ ಕಾಂಗ್ರೆಸ್ ಸೀಟು ಹಂಚಿಕೆಯನ್ನು ಅಂತಿಮಗೊಳಿಸದಿದ್ದರೆ, ಇಂದು ಸಂಜೆ ಎಲ್ಲಾ 90 ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಯನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದರು.
‘ಆಮ್ ಆದ್ಮಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಇಂದು ಸಂಜೆಯೊಳಗೆ 90 ಕ್ಷೇತ್ರಗಳ ಎಲ್ಲಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ‘ ಎಂದು ಅವರು ಹೇಳಿದ್ದರು.
ಉಭಯ ಪಕ್ಷಗಳ ನಡುವೆ ಮಾತುಕತೆ ಸ್ಥಗಿತಗೊಂಡಿದ್ದು, ಎಎಪಿ 10 ಕ್ಷೇತ್ರಗಳಿಗೆ ಬೇಡಿಕೆ ಇಟ್ಟರೆ, ಕಾಂಗ್ರೆಸ್ 5 ಕ್ಷೇತ್ರಗಳನ್ನು ಬಿಟ್ಟು ಕೊಡುವುದಾಗಿ ಹೇಳಿದೆ. ಈ ಕುರಿತು ಕಾಂಗ್ರೆಸ್ ಪ್ರತಿಕ್ರಿಯೆಗಾಗಿ ಎಎಪಿ ಕಾಯುತ್ತಿದೆ. ಆದರೆ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’ ಎಂದು ಅವರು ಹೇಳಿದ್ದರು.
90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಸೆಪ್ಟೆಂಬರ್ 12 ಕೊನೆಯ ದಿನವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth