ಪ್ರಾಣಿ ವಧೆಯ ಫೋಟೋ ಸ್ಟೇಟಸ್ ಆರೋಪ: ಮುಸ್ಲಿಂ ವ್ಯಕ್ತಿಯ ಅಂಗಡಿಯಲ್ಲಿ ಸಂಘಪರಿವಾರದಿಂದ ದಾಂಧಲೆ

ಪ್ರಾಣಿವಧೆಯ ಫೋಟೋವನ್ನು ವಾಟ್ಸಪ್ ಸ್ಟೇಟಸ್ ನಲ್ಲಿ ಹಂಚಿಕೊಂಡಿದ್ದಾರೆ ಎಂಬ ಆರೋಪದಲ್ಲಿ ಸಂಘಪರಿವಾರದ ಕಾರ್ಯಕರ್ತರ ಗುಂಪೊಂದು ಮುಸ್ಲಿಂ ಸಮುದಾಯದ ವ್ಯಕ್ತಿಗೆ ಸೇರಿದ ಜವಳಿ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿ ಅಂಗಡಿಯನ್ನು ಧ್ವಂಸಗೊಳಿಸಿದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಈ ಬಗ್ಗೆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ದಾಳಿಗೊಳಗಾದ ವ್ಯಕ್ತಿಯನ್ನು ಜಾವೇದ್ ಎಂದು ಗುರುತಿಸಲಾಗಿದೆ. ಇವರು ಮೂಲತ ಉತ್ತರ ಪ್ರದೇಶದವರು. ಹಲವು ವರ್ಷಗಳಿಂದ ಈ ಪಟ್ಟಣದಲ್ಲಿ ವ್ಯಾಪಾರ ಮಾಡಿಕೊಂಡಿದ್ದರು. ಸಂಘ ಪರಿವಾರ ದಾಂದಲೆ ನಡೆಸ್ತಾ ಇದ್ದಾಗ ಪೊಲೀಸರು ಮೂಕ ಪ್ರೇಕ್ಷಕರಾಗಿ ನೋಡುತ್ತಿದ್ದರು ಎಂದು ಕೂಡ ವರದಿಯಾಗಿದೆ.
ಅಂಗಡಿಯನ್ನು ಧ್ವಂಸಗೊಳಿಸಿದ ಗುಂಪು ಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆ ಕೈಗೊಂಡಿತ್ತು. ಮಾತ್ರವಲ್ಲ, ಗೋಲಿ ಮಾರೋ ಸಾಲೋಂಕೋ ಎಂಬ ಘೋಷಣೆಗಳನ್ನು ಕೂಗಿತು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ವ್ಯಾಪಾರಿಗಳ ಸಂಘ ಸೇರಿದಂತೆ ವಿವಿಧ ಗುಂಪುಗಳು ಕರೆ ನೀಡಿದ ಬಳಿಕ ದಾಳಿ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth