ಕೇಂದ್ರ ಬಜೆಟ್ ಕುತೂಹಲ: ಕೇಂದ್ರ ಸರ್ಕಾರದಿಂದ ಬಿಹಾರಕ್ಕೆ ಭರ್ಜರಿ ಗಿಫ್ಟ್

ಈ ವರ್ಷ ಚುನಾವಣೆ ನಡೆಯಲಿರುವ ಬಿಹಾರಕ್ಕೆ ಕೇಂದ್ರ ಸರ್ಕಾರ ಬಜೆಟ್ನಲ್ಲಿ ಹಲವು ಕೊಡುಗೆಗಳನ್ನು ನೀಡಿದೆ. ನಿತೀಶ್ ಕುಮಾರ್ ಎನ್ ಡಿ ಎ ಮೈತ್ರಿ ತೊರೆಯಲಿದ್ದಾರೆ ಎಂಬ ಚರ್ಚೆಗಳ ನಡುವೆಯೇ ಈ ಕೊಡುಗೆ ಬಿಹಾರಕ್ಕೆ ಸಿಕ್ಕಿದೆ. ಬಜೆಟ್‌ಗೂ ಮುನ್ನ ನಿರ್ಮಲಾ ಸೀತಾರಾಮನ್ ಅವರಿಗೆ ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ 32 ಪುಟಗಳ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದರು.
ತಮ್ಮ 8ನೇ ಬಜೆಟ್ ಭಾಷಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಿಹಾರದಲ್ಲಿ ಮಖಾನಾ ಮಂಡಳಿ ಸ್ಥಾಪನೆ. ನಾಗರಿಕ ವಿಮಾನಯಾನ ಅಭಿಯಾನದ ಭಾಗವಾಗಿ ಬಿಹಾರವು ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಗಳನ್ನು ಹೊಂದಲು ಸಜ್ಜಾಗಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದರು.
ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಮಿಥಿಲಾಂಚಲ್ ಪ್ರದೇಶದಲ್ಲಿ ಕಾಲುವೆ ಯೋಜನೆಯನ್ನು ಸಹ ಘೋಷಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಪಾಟ್ನಾದಲ್ಲಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಯ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ.
ಪೂರ್ವ ಪ್ರದೇಶದಲ್ಲಿ ಆಹಾರ ಸಂಸ್ಕರಣಾ ಚಟುವಟಿಕೆಗಳಿಗೆ ಬಲವಾದ ಪ್ರೋತ್ಸಾಹ ನೀಡಲು ಬಿಹಾರದಲ್ಲಿ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣಾ ಸಂಸ್ಥೆಯನ್ನು ಸ್ಥಾಪಿಸುವ ಬಗ್ಗೆಯೂ ಹಣಕಾಸು ಸಚಿವೆ ನಿರ್ಮಲಾ ಪ್ರಸ್ತಾಪಿಸಿದ್ದಾರೆ.
ಹಾಗೇ, ಅವರು ಬಿಹಾರದಲ್ಲಿ ಗ್ರೀನ್ಹೌಸ್ ವಿಮಾನ ನಿಲ್ದಾಣಗಳು, ಬಿಹ್ತಾದಲ್ಲಿ ಬ್ರೌನ್‌ಫೀಲ್ಡ್ ವಿಮಾನ ನಿಲ್ದಾಣ, ಪಾಟ್ನಾ ವಿಮಾನ ನಿಲ್ದಾಣದ ವಿಸ್ತರಣೆಯನ್ನು ಸಹ ಘೋಷಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj