ನೀತಿ ಸಂಹಿತೆ ಉಲ್ಲಂಘನೆ ಆರೋಪ: ಮೋದಿ, ರಾಹುಲ್ ಗಾಂಧಿ ಹತ್ರ ಸ್ಪಷ್ಟನೆ ಕೇಳಿದ ಚುನಾವಣಾ ಆಯೋಗ

25/04/2024

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿಗೆ ಸ್ಪಷ್ಟನೆ ಕೇಳಿದೆ. ಏಪ್ರಿಲ್ 29 ರಂದು ಬೆಳಗ್ಗೆ 11 ಗಂಟೆಯೊಳಗೆ ಪ್ರತಿಕ್ರಿಯಿಸುವಂತೆ ಬಿಜೆಪಿ ಮತ್ತು ಕಾಂಗ್ರೆಸ್‍ಗೆ ಸೂಚಿಸಿದೆ.
ಎರಡೂ ಧರ್ಮ, ಜಾತಿ, ಸಮುದಾಯ ಅಥವಾ ಭಾಷೆಯ ಆಧಾರದ ಮೇಲೆ ದ್ವೇಷ ಮತ್ತು ವಿಭಜನೆಯನ್ನು ಉಂಟು ಮಾಡುವ ಆರೋಪಗಳ ಹಿನ್ನಲೆ ಮೋದಿ ಮತ್ತು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದ್ದವು.
ಮೊದಲ ಹಂತವಾಗಿ ಪಕ್ಷದ ಅಧ್ಯಕ್ಷರನ್ನು ಜವಾಬ್ದಾರರನ್ನಾಗಿ ಮಾಡುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಪಕ್ಷದ ಅಧ್ಯಕ್ಷರಿಗೆ ನೀಡಿದ ನೋಟಿಸ್ ನಲ್ಲಿ ಉನ್ನತ ಸ್ಥಾನದಲ್ಲಿರುವವರು ಪ್ರಚಾರ ಭಾಷಣಗಳು ಹೆಚ್ಚು ಗಂಭೀರ ಪರಿಣಾಮಗಳನ್ನು ಬೀರುತ್ತವೆ ಎಂದು ಅಯೋಗ ಅಭಿಪ್ರಾಯಪಟ್ಟಿದೆ‌.
ಏಪ್ರಿಲ್ 21 ರಂದು ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಇಸಿಐಗೆ ದೂರು ನೀಡಿತ್ತು. ಮತ್ತೊಂದೆಡೆ ರಾಷ್ಟ್ರದಲ್ಲಿ ಬಡತನ ಹೆಚ್ಚಿದೆ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version