ಬಿಹಾರ ಮೂಲದ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು! - Mahanayaka

ಬಿಹಾರ ಮೂಲದ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು!

crime news
07/02/2024


Provided by

ರಾಮನಗರ: ಬಿಹಾರ ಮೂಲದ ವ್ಯಕ್ತಿಯನ್ನು ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಚನ್ನಪಟ್ಟಣ ನಗರದ ಸಾತನೂರು ವೃತ್ತದ ಬಳಿ ನಡೆದಿದೆ.

ಬಿಹಾರ ಮೂಲದ ಸಂಜಿತ್ ಕುಮಾರ್ ಠಾಕೂರ್ ( 30) ಹತ್ಯೆಗೀಡಾದ ಯುವಕನಾಗಿದ್ದಾನೆ.  ದುಷ್ಕರ್ಮಿಗಳು ಕ್ಷುಲ್ಲಕ ಕಾರಣಕ್ಕೆ ಸಂಜಿತ್‌ ಕುಮಾರ್‌ ಜೊತೆಗೆ ಜಗಳವಾಡಿದ್ದು, ಬಳಿಕ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಚನ್ನಪಟ್ಟಣ ಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ