2:42 AM Saturday 10 - January 2026

ಮಧ್ಯರಾತ್ರಿ ಮೆಕ್ಕೆಜೋಳ ತುಂಬಿದ್ದ ಲಾರಿ ಸುಟ್ಟು ಭಸ್ಮ!

kottigehara
10/01/2026

ಕೊಟ್ಟಿಗೆಹಾರ:  ಚಾರ್ಮಾಡಿ ಘಾಟಿಯಲ್ಲಿ ಮಧ್ಯರಾತ್ರಿ ಮೆಕ್ಕೆಜೋಳ ತುಂಬಿದ್ದ ಲಾರಿಯೊಂದು ಸಂಪೂರ್ಣವಾಗಿ ಹೊತ್ತಿ ಉರಿದು ಭಸ್ಮವಾಗಿದೆ. ಲಾರಿ ಬೆಂಕಿಗಾಹುತಿಯಾದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಸುಟ್ಟು ಕರಕಲಾಗಿದೆ.

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಈ ಘಟನೆ ನಡೆದಿದ್ದು, ಜಾವಗಲ್‌ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಮೆಕ್ಕೆಜೋಳದ ಲಾರಿಯಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಲಾರಿಗೆ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಲಾರಿ ಹೊತ್ತಿ ಉರಿದ ಪರಿಣಾಮ ಬೆಂಕಿ ಚಾರ್ಮಾಡಿ ಅರಣ್ಯ ಪ್ರದೇಶಕ್ಕೂ ವ್ಯಾಪಿಸಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ತುರ್ತು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಇದರಿಂದ ಭಾರಿ ಅನಾಹುತ ತಪ್ಪಿದೆ.

 

ಲಾರಿಯಲ್ಲಿ ಇದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version